
- ಆ.25ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಚುನಾವಣಾ ಆಯೋಗಕ್ಕೆ ಸೂಚನೆ
- ಮಹಾರಾಷ್ಟ್ರ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ಪ್ರಕರಣವನ್ನು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಲಾಗಿದ್ದು, ಆಗಸ್ಟ್ 25ರಂದು ವಿಚಾರಣೆ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಪಾಳಯಗಳ ನಡುವಿನ ಪಕ್ಷದ ಚಿಹ್ನೆ ವಿವಾದದ ಬಗ್ಗೆ ಆಗಸ್ಟ್ 25 (ಗುರುವಾರ)ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಚುನಾವಣಾ ಆಯೋಗಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಿದೆ.
ಈ ಸುದ್ದಿ ಓದಿದ್ದೀರಾ?: ಎಸಿಬಿ ರದ್ದತಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ ವ್ಯಕ್ತಿ
ಗುರುವಾರ (ಆಗಸ್ಟ್ 25), ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಮಹಾರಾಷ್ಟ್ರ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲಿದೆ.
ಉದ್ಧವ್ ಠಾಕ್ರೆ ಬಣದ ಎಲ್ಲ ಮನವಿಗಳನ್ನು ವಜಾಗೊಳಿಸುವಂತೆ ಶಿಂಧೆ ಬಣ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿತ್ತು.
ಜುಲೈನಲ್ಲಿ ಶಿವಸೇನೆಯ ಚಿಹ್ನೆಯಾದ ಬಿಲ್ಲು ಮತ್ತು ಬಾಣದ ಗುರುತು ತಮ್ಮದೆಂದು ಸಾಬೀತುಪಡಿಸುವ ದಾಖಲೆಗಳನ್ನು ಸಲ್ಲಿಸುವಂತೆ ಠಾಕ್ರೆ ಮತ್ತು ಶಿಂಧೆ ಬಣಕ್ಕೆ ಚುನಾವಣಾ ಆಯೋಗ ತಿಳಿಸಿತ್ತು.