ಮಂಗಳೂರು| ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸ್ಪೋಟ; ಸ್ಥಳಕ್ಕೆ ಅಧಿಕಾರಿಗಳ ದೌಡು

Mangalore blast
  • ಆಟೋ ಚಾಲಕ, ಪ್ರಯಾಣಿಕನಿಗೆ ಸುಟ್ಟ ಗಾಯ – ಆಸ್ಪತ್ರೆಗೆ ದಾಖಲು
  • ಪೊಲೀಸ್ ಆಯುಕ್ತ ಶಶಿಕುಮಾರ್, ವಿಧಿವಿಜ್ಞಾನ ಇಲಾಖೆ ತಜ್ಞರ ಪರಿಶೀಲನೆ

ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಸ್ಫೋಟವಾಗಿರುವ ಘಟನೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಮತ್ತು ವಿಧಿವಿಜ್ಞಾನ ಇಲಾಖೆಯ ತಜ್ಞರು ಹಾಗೂ ಬಾಂಬ್ ನಿಷ್ಕ್ರಿಯ ದಳ ಭೇಟಿನೀಡಿ ಪರಿಶೀಲನೆ ನಡೆಸಿದರು. ಸ್ಪೋಟ ಆಗಿರುವ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಫೋಟಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್, ವಿಧಿವಿಜ್ಞಾನ ಇಲಾಖೆಯ ತಜ್ಞರು ಹಾಗೂ ಬಾಂಬ್ ನಿಷ್ಕ್ರಿಯ ದಳ ತನಿಖೆ ಚುರುಕುಗೊಳಿಸಿದ್ದಾರೆ.

Eedina App

ಘಟನೆ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, “ಪ್ರಯಾಣಿಕ ಹತ್ತಿದ ಬಳಿಕ ಆಟೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಟೋದಲ್ಲಿ ತೆರಳುತ್ತಿದ್ದ ಪ್ರಯಾಣಿಕನ ಬಳಿ ಬ್ಯಾಗ್ ಇತ್ತು. ಘಟನೆಯಲ್ಲಿ ಪ್ರಯಾಣಿಕ ಮತ್ತು ಚಾಲಕನಿಗೆ ಗಾಯವಾಗಿದೆ. ಘಟನೆ ಬಗ್ಗೆ ಸಾರ್ವಜನಿಕರು ಯಾವುದೇ ಆತಂಕ ಪಡುವುದು ಬೇಡ” ಎಂದು ಹೇಳಿದ್ದಾರೆ.

Mangalore blast

“ಕಂಕನಾಡಿ ಪೊಲೀಸ್ ಠಾಣೆಯ ಬಳಿ ಈ ಘಟನೆ ನಡೆದಿದೆ. ಅಟೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ; ನಾಗುರಿಯಿಂದ ಪಂಪ್ ವೆಲ್ ಕಡೆ ಅಟೋ ಸಾಗುತಿತ್ತು. ನಾಗುರಿಯಿಂದ ಹತ್ತಿದ ಪ್ರಯಾಣಿಕನ ಕೈಯಲ್ಲಿದ್ದ ಪ್ಲ್ಯಾಸ್ಟಿಕ್ ಬ್ಯಾಗ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬ್ಯಾಗ್ ಹಿಡಿದುಕೊಂಡ ವ್ಯಕ್ತಿಗೆ ಬೆಂಕಿ ತಗುಲಿದ್ದು, ಬೆಂಕಿ ತಗುಲಿದ ಸಂದರ್ಭ ಅಟೋ ಒಳಭಾಗ ಸುಟ್ಟು ಹೋಗಿದೆ. ಪ್ರಯಾಣಿಕ ಹಾಗೂ ಅಟೋ ಚಾಲಕನಿಗೆ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

AV Eye Hospital ad

ಈ ಸುದ್ದಿ ಓದಿದ್ದೀರಾ? ಉಡುಪಿ | ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ನೇರ ಹಣ ಪಾವತಿ: ಕೋಟ ಶ್ರೀನಿವಾಸ ಪೂಜಾರಿ

“ಬೆಂಕಿ ಕಾಣಿಸಿಕೊಂಡಿದೆ ಎಂದು ಅಟೋ ಚಾಲಕ ಹೇಳುತ್ತಿದ್ದಾನೆ. ಈ ಬಗ್ಗೆ ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆ. ಸ್ಪೋಟ ಸಂಭವಿಸಿದ ಬಗ್ಗೆ ಪ್ರತ್ಯಕ್ಷ ಸಾಕ್ಷಿಗಳು ಏನು ಹೇಳಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
1 ವೋಟ್
eedina app