ಜೆಎನ್‌ಯು ಕ್ಯಾಂಪಸ್‌ | ಗುಂಪು ಘರ್ಷಣೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ; ರಾಜಕೀಯ ಗಲಭೆಯಲ್ಲ ಎಂದ ವಿವಿ

  • ನರ್ಮದಾ ಹಾಸ್ಟೆಲ್ ಬಳಿ ಹುಟ್ಟುಹಬ್ಬದ ಪಾರ್ಟಿಯಲ್ಲಿನ ಘಟನೆಯಿಂದ ಜಗಳ
  • ಜೆಎನ್‌ಯುನಲ್ಲಿ ದೆಹಲಿ ಪೊಲೀಸರಿಂದ ಎರಡು ಪ್ರತ್ಯೇಕ ಎಫ್ಐಆರ್‌ ದಾಖಲು 

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ಗುರುವಾರ ಎರಡು ಯುವಕರ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ (ನ. 11) ತಿಳಿಸಿದ್ದಾರೆ.

Eedina App

ಗುರುವಾರ ನಡೆದ ಘರ್ಷಣೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ವಿಶ್ವವಿದ್ಯಾಲಯದ ಪ್ರಕಾರ ಓರ್ವ ವಿದ್ಯಾರ್ಥಿಗೆ ಮಾತ್ರ ಗಾಯಗಳಾಗಿವೆ.

ಬುಧವಾರ ಹುಟ್ಟುಹಬ್ಬದ ಪಾರ್ಟಿಯಲ್ಲಿ ನಡೆದ ಘಟನೆಗಳ ಪರಿಣಾಮವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ. 

AV Eye Hospital ad

“ನಿನ್ನೆ ಹುಟ್ಟುಹಬ್ಬದ ಪಾರ್ಟಿಯಲ್ಲಿ ನಡೆದ ಘಟನೆಯಿಂದಾಗಿ ಜಗಳವಾಗಿತ್ತು. ಪಾರ್ಟಿಯಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಕಪಾಳಮೋಕ್ಷ ಮಾಡಿದ. ಇದರಿಂದ ಆ ವ್ಯಕ್ತಿ ಮತ್ತು ಅವನ ಸ್ನೇಹಿತರ ಮೇಲೆ ಯುವತಿ ಕಡೆಯ ಕೆಲವು ಸ್ನೇಹಿತರು ದಾಳಿ ಮಾಡಿದ್ದಾರೆ” ಎಂದು ಅಧಿಕಾರಿಗಳು ಹೇಳಿದರು.

ಕೆಲವು ವಿಡಿಯೋಗಳು ವೈರಲ್ ಆಗಿದ್ದು, ಕೆಲವು ವಿದ್ಯಾರ್ಥಿಗಳು ಕೋಲುಗಳೊಂದಿಗೆ ಕ್ಯಾಂಪಸ್‌ನಲ್ಲಿ ಓಡುತ್ತಿರುವುದು ಕಂಡುಬಂದಿದೆ. ಮತ್ತೊಂದು ವಿಡಿಯೋದಲ್ಲಿ ಮುಸುಕುಧಾರಿ ವಿದ್ಯಾರ್ಥಿಗಳು ಕೋಲುಗಳನ್ನು ಹಿಡಿದುಕೊಂಡಿರುವುದು ಕಂಡುಬಂದಿದೆ. ವಿದ್ಯಾರ್ಥಿಗಳಲ್ಲಿ ಒಬ್ಬರು ಜೆಎನ್‌ಯುನ ಸಮವಸ್ತ್ರ ಧರಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಸತ್ಯಾಸತ್ಯತೆ ಪರಿಶೀಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಯಾವುದೇ ರಾಜಕೀಯ ಗುಂಪುಗಳು ಘರ್ಷಣೆಯಲ್ಲಿ ಭಾಗಿಯಾಗಿಲ್ಲ. ಈ ಬಗ್ಗೆ ಆಡಳಿತವು ತನ್ನ ಭದ್ರತಾ ಅಧಿಕಾರಿಗಳಿಂದ ವರದಿ ಕೇಳಿದೆ ಮತ್ತು ಅದರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ವಿಶ್ವವಿದ್ಯಾಲಯದ ಮೂಲಗಳು ಮತ್ತು ಪೊಲೀಸರು ತಿಳಿಸಿದ್ದಾರೆ. 

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಶಿಕ್ಷಣ ದಿನ 2022 | ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಜನ್ಮೋತ್ಸವ

"ಜೆಎನ್‌ಯು ವಿದ್ಯಾರ್ಥಿ ನಿಶಾಂತ್ ನಗರ್ ಅವರ ದೂರಿನ ಮೇರೆಗೆ, ಭಾರತೀಯರ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ), 341 (ತಪ್ಪು ತಡೆಯದ ಶಿಕ್ಷೆ) ಹಾಗೂ 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಂಡ ಸಂಹಿತೆ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತರು (ನೈಋತ್ಯ) ಮನೋಜ್ ಸಿ ಅವರು ತಿಳಿಸಿದ್ದಾರೆ. 

ಮತ್ತೊಬ್ಬ ಜೆಎನ್‌ಯು ವಿದ್ಯಾರ್ಥಿ ಕಾರ್ತಿಕ್ ಎಂಬವರ ದೂರಿನ ಮೇರೆಗೆ ವಸಂತ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಇದೇ ರೀತಿಯ ಸೆಕ್ಷನ್‌ಗಳ ಅಡಿಯಲ್ಲಿ ಎರಡನೇ ಎಫ್ಐಆರ್ ದಾಖಲಿಸಲಾಗಿದೆ. 

ಇತ್ತೀಚೆಗೆ ಎಡ- ಸಂಯೋಜಿತ ವಿದ್ಯಾರ್ಥಿ ಸಂಘಟನೆಗಳು ಮತ್ತು ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಒಳಗೊಂಡ ಹಲವಾರು ಹಿಂಸಾಚಾರದ ನಿದರ್ಶನಗಳಿಗೆ ಜೆಎನ್‌ಯು ಸಾಕ್ಷಿಯಾಗಿತ್ತು. 

ಈ ವರ್ಷ ಏಪ್ರಿಲ್‌ನಲ್ಲಿ ರಾಮನವಮಿಯಂದು ಕಾವೇರಿ ಹಾಸ್ಟೆಲ್‌ನಲ್ಲಿ ಮಾಂಸಾಹಾರ ನೀಡಿದ್ದಕ್ಕಾಗಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿತ್ತು. ಜನವರಿ 5, 2020ರಂದು, ಮುಸುಕುಧಾರಿಗಳ ಗುಂಪೊಂದು ಕ್ಯಾಂಪಸ್‌ಗೆ ನುಗ್ಗಿ ಒಂದೇ ಬಾರಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು ವಿವಾದ ಸೃಷ್ಟಿಸಿತ್ತು.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app