ಮುರುಘಾ ಶ್ರೀ ಪ್ರಕರಣ | ಹಾಸ್ಟೆಲ್ ವಾರ್ಡನ್‌ಗೆ ಜಾಮೀನು ತಿರಸ್ಕರಿಸಿದ ಜಿಲ್ಲಾ ನ್ಯಾಯಾಲಯ

Murugha
  • ಪ್ರಕರಣದ ಎರಡನೇ ಆರೋಪಿಗೆ ಜಾಮೀನು ತಿರಸ್ಕೃತ
  • ಜಿಲ್ಲಾ ನ್ಯಾಯಾಧೀಶೆ ಕೋಮಲಾ ಅವರಿಂದ ಆದೇಶ

ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣದಲ್ಲಿ ಬಂಧಿಯಾಗಿರುವ ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಗೆ ಚಿತ್ರದುರ್ಗದ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ.

ಜಾಮೀನು ತಿರಸ್ಕರಿಸಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಆದೇಶ ಹೊರಡಿಸಿದ್ದಾರೆ.

ಏನಿದು ಪ್ರಕರಣ?

ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಶ್ರೀಗಳ ವಿರುದ್ಧ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಶಿವಮೂರ್ತಿ ಶ್ರೀಗಳು ಮೊದಲನೆ ಆರೋಪಿಯಾಗಿದ್ದರೆ, ಎರಡನೇ ಆರೋಪಿ ಹಾಸ್ಟೆಲ್‌ ವಾರ್ಡನ್‌ ರಶ್ಮಿ ಆಗಿದ್ದಾರೆ. ಪ್ರಕರಣದ ಮೂರನೇ ಆರೋಪಿ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿ ಎ ಜೆ ಪರಮಶಿವಯ್ಯ ಹಾಗೂ ಐದನೇ ಆರೋಪಿ ಎನ್‌ ಗಂಗಾಧರ ಆಗಿದ್ದಾರೆ. 

ಈ ಸುದ್ದಿ ಓದಿದ್ದೀರಾ?: ಮುರುಘಾ ಶ್ರೀ ಪ್ರಕರಣ | ಶಿವಮೂರ್ತಿ ಶ್ರೀಗೆ ಎದೆನೋವು; ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

ಸಂತ್ರಸ್ತ ಬಾಲಕಿಯರಿಬ್ಬರು ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದರು. ನಂತರ ಆ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದ್ದು, ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.‌

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಸೆಪ್ಟೆಂಬರ್‌ 1ರಂದು ಮುರುಘಾ ‍ಶ್ರೀಗಳನ್ನು ಬಂಧಿಸಿದ್ದರು. ಸದ್ಯ ಶಿವಮೂರ್ತಿ ಶ್ರೀಗಳು ಮತ್ತು ಪ್ರಕರಣದ ಎರಡನೇ ಆರೋಪಿ, ವಾರ್ಡನ್‌ ರಶ್ಮಿ ನ್ಯಾಯಾಂಗ ಬಂಧನದಲ್ಲಿದ್ದಾರೆ. 

ನಿಮಗೆ ಏನು ಅನ್ನಿಸ್ತು?
0 ವೋಟ್