ಮುರುಘಾ ಶ್ರೀ ಪ್ರಕರಣ | ಶಿವಮೂರ್ತಿ ಸ್ವಾಮೀಜಿಗೆ ನ.21ರವರೆಗೆ ನ್ಯಾಯಾಂಗ ಬಂಧನ

Murugha Shree
  • ಶಿವಮೂರ್ತಿ ಸ್ವಾಮೀಜಿಗೆ ಮತ್ತೆ ಒಂದು ವಾರ ನ್ಯಾಯಾಂಗ ಬಂಧನ
  • ಇದುವರೆಗೆ ಎಂಟು ಬಾರಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ 

ಪೋಕ್ಸೊ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘ ರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಸ್ವಾಮಿ ನ್ಯಾಯಾಂಗ ಬಂಧನವನ್ನು ನವೆಂಬರ್‌ 21ರವರೆಗೆ ವಿಸ್ತರಿಸಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಇಂದಿಗೆ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗಿದ್ದರಿಂದ ಶಿವಮೂರ್ತಿ ಮುರುಘಾ ಸ್ವಾಮೀಜಿಯನ್ನು ಎರಡನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ ಕೆ ಕೋಮಲಾ ಅವರು ಶಿವಮೂರ್ತಿ ಸ್ವಾಮಿ ಮತ್ತು ಪರಮಶಿವಯ್ಯ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ನ.21ರವರೆಗೆ ವಿಸ್ತರಿಸಿದರು.

Eedina App

ಶಿವಮೂರ್ತಿ ಸ್ವಾಮಿಗೆ ನ್ಯಾಯಾಲಯವು ಸೆ.2ರಂದು ಮೂರು ದಿನಗಳ ಅವಧಿಗೆ, ಸೆ.5ರಂದು ಒಂಭತ್ತು ದಿನಗಳವರೆಗೆ, ಸೆ.14ರಂದು 14 ದಿನಗಳ ಅವಧಿಗೆ, ಸೆ.27ರಂದು 14 ದಿನಗಳವರೆಗೆ, ಅ.10ರಂದು ಅ.21ರವರೆಗೆ, ನ. 3ರವರೆಗೆ, ಇದೀಗ ನ.14ರವರೆಗೆ, ಇದೀಗ ನ.21ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಅಂದರೆ, ಈವರೆಗೆ ನ್ಯಾಯಾಲಯವು ಶಿವಮೂರ್ತಿ ಸ್ವಾಮಿಗೆ ಎಂಟು ಬಾರಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

ಏನಿದು ಪ್ರಕರಣ?

AV Eye Hospital ad

ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಸರಣಿ ಪೋಕ್ಸೊ ಪ್ರಕರಣ ದಾಖಲಾಗಿವೆ.

ಸಂತ್ರಸ್ತ ಬಾಲಕಿಯರಿಬ್ಬರು ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಶಿವಮೂರ್ತಿ ಸ್ವಾಮಿ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದರು. ನಂತರ ಆ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದ್ದು, ಶಿವಮೂರ್ತಿ ಸ್ವಾಮಿ ವಿರುದ್ಧ ಪೋಕ್ಸೊ ಕಾಯ್ದೆ, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.‌ 

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಸೆ.1ರಂದು ಶಿವಮೂರ್ತಿ ಸ್ವಾಮಿಯನ್ನು ಬಂಧಿಸಿದ್ದರು. ಬಳಿಕ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಸೆ.23ರಂದು ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಲಯ ಜಾಮೀನು ತಿರಸ್ಕರಿಸಿತ್ತು. ಸದ್ಯ ಸ್ವಾಮಿ ವಿರುದ್ಧ ಮತ್ತೆರಡು ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದ್ದು, ಚಿತ್ರದುರ್ಗ ಜೈಲಿನಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮುರುಘಾ ಶ್ರೀ ಪ್ರಕರಣ | "ಅಪ್ಪಾಜಿ ಚಾಕ್ಲೆಟ್ ಕೊಡ್ತಿದ್ರು ನಮಗೆ ನಿದ್ರೆ ಬರ್‍ತಿತ್ತು": ಮುಖ್ಯಮಂತ್ರಿ, ಪ್ರಧಾನಿ, ಸುಪ್ರೀಂಕೋರ್ಟ್‌ ಸಿಜೆಐಗೆ ಸಂತ್ರಸ್ತೆ ಪತ್ರ

ಋತುಮತಿಯಾಗದ ಬಾಲಕಿಯರಿಗೂ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಿವಮೂರ್ತಿ ಸ್ವಾಮಿ ವಿರುದ್ಧ ಮತ್ತೊಂದು ಪೋಕ್ಸೊ ಪ್ರಕರಣ ದಾಖಲಾಗಿದೆ.
ಮಕ್ಕಳನ್ನು ದತ್ತು ಪ್ರಕ್ರಿಯೆಗೆ ಒಳಪಡಿಸದೆ, ಅಕ್ರಮವಾಗಿ ಇಟ್ಟುಕೊಂಡಿರುವ ಹಿನ್ನೆಲೆಯಲ್ಲಿ ಒಡನಾಡಿ ಸಂಸ್ಥೆ ಮುರುಘ ಸ್ವಾಮಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app