
- ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾ. ಶಿವರಾಜ ವಿ ಪಾಟೀಲ್ರಿಂದ ಉದ್ಘಾಟನೆ
- ಮೇರಿಲ್ಯಾಂಡ್ ವಿವಿ ಡೀನ್ ಪ್ರಭುದೇವ ಕೋಣನ ಅವರು ಉಪಸ್ಥಿತಿ
ಕನ್ನಡ ಸಾಹಿತ್ಯ ಪರಿಷತ್ತು, ಕೋಚೆ ಸಾಹಿತ್ಯ ಮತ್ತು ಶಿಕ್ಷಣ ಟ್ರಸ್ಟ್ , ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಭಾರತೀಯ ವಿದ್ಯಾಭವನದ ಸಹಭಾಗಿತ್ವದಲ್ಲಿ ನಾಳೆ (ಜು.10)ಬೆಳಿಗ್ಗೆ 10.30ಕ್ಕೆ ಗಾಂಧಿ ಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಕೋ. ಚೆನ್ನಬಸಪ್ಪನವರ ಜನ್ಮಶತಾಬ್ದಿ ಸಮಾರಂಭವನ್ನು ಆಯೋಜಿಸಲಾಗಿದೆ.
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಬಿ.ಎಲ್. ಶಂಕರ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ ಮತ್ತು ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಮೇರಿಲ್ಯಾಂಡ್ ಯುನಿವರ್ಸಿಟಿಯ ಡೀನ್ ಡಾ. ಪ್ರಭುದೇವ ಕೋಣನ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿಯವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರ ಎಂದು ಕಸಾಪದ ಪ್ರಕಟಣೆ ತಿಳಿಸಿದೆ.
ಮಧ್ಯಾಹ್ನ 12.30ರಿಂದ 1.45ರವರೆಗೆ ನಡೆಯಲಿರುವ ವಿಚಾರ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ವಹಿಸಲಿದ್ದಾರೆ. ಆಕಾಶವಾಣಿಯ ವಿಶ್ರಾಂತ ನಿರ್ದೇಶಕ ಬಸವರಾಜ ಸಾದರ ಅವರು ಕೋಚೆ ಮತ್ತು ಪ್ರಗತಿಶೀಲ ಸಾಹಿತ್ಯ ಚಳವಳಿಯ ಕುರಿತು ಹಾಗೂ ಹಿರಿಯ ಸಾಹಿತಿಗಳಾದ ಪ್ರೊ. ಕೆ.ಎಸ್. ಮಧುಸೂದನ ಅವರು ಕೋಚೆ ಅವರ ಅರವಿಂದ ಸಾಹಿತ್ಯ ಅನುವಾದಗಳ ಕುರಿತು ವಿಷಯವನ್ನು ಮಂಡಿಸಲಿದ್ದಾರೆ.
ಮಧ್ಯಾಹ್ನ 3 ರಿಂದ 4ರವರೆಗೆ ‘ನಾನು ಕಂಡಂತೆ ಕೋಚೆ’ ಕುರಿತು ಹಿರಿಯ ಸಂಶೋಧಕರಾದ ವೀರಶೆಟ್ಟಿ ಬಿ. ಗಾರಂಪಳ್ಳಿ, ಸಾಹಿತಿ ಪ್ರಕಾಶ ಗಿರಿಮಲ್ಲನವರ, ಕೋಚೆಯವರ ಮಗಳು ಶಾಂತ ಜಯಪ್ರಸಾದ್, ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಅಧ್ಯಕ್ಷ ಡಾ. ಕೆ.ಸಿ. ಗುರುದೇವ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಕೆ.ಬಿ. ಗುದಗಿ ಮಾತನಾಡಲಿದ್ದಾರೆ.
ಸಂಜೆ 4ರಿಂದ 5-30ರವರೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ವಿದ್ಯಾಭವನದ ಅಧ್ಯಕ್ಷ ಕೆ.ಜಿ. ರಾಘವನ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.