ಒಂದು ನಿಮಿಷದ ಓದು | ಭ್ರಷ್ಟಾಚಾರ ನಿಗ್ರಹ ದಳ ರದ್ದು; ಲೋಕಾಯುಕ್ತ ಅಧಿಕಾರ ಮರುಸ್ಥಾಪಿಸಿ ಆದೇಶ

acb lokayukta

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಗೊಳಿಸಿರುವ ಹೈಕೋರ್ಟ್‌ ತೀರ್ಪನ್ನು ಶುಕ್ರವಾರ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ. ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ಆದೇಶ ಹೊರಡಿಸಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದ್ದು, 2016ರಲ್ಲಿ ಭ್ರಷ್ಟಾಚಾರ ನಿಗ್ರಹ ಸಂಸ್ಥೆ (ಎಸಿಬಿ) ಸ್ಥಾಪನೆ, ಪೊಲೀಸ್‌ ಠಾಣೆಗಳ ಆಧಿಕಾರ, ತನಿಖಾಧಿಕಾರವನ್ನು ಹಿಂಪಡೆಯಲಾಗಿದೆ. ಜತೆಗೆ, ಎಸಿಬಿಯಲ್ಲಿರುವ ತನಿಖಾ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸುವಂತೆ ಆದೇಶಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ಈದಿನ ವಿಶೇಷ : ಮರಳಿ ಕಾರ್ಯಾಚರಣೆಗಿಳಿದ ಲೋಕಾಯುಕ್ತಕ್ಕೆ ಸಿಬ್ಬಂದಿ ಕೊರತೆಯದ್ದೇ ಸಮಸ್ಯೆ

2016ರಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸುವ ಅಧಿಕಾರವನ್ನು ಲೋಕಾಯುಕ್ತ ಪೊಲೀಸ್‌ ವಿಭಾಗದಿಂದ ಹಿಂಪಡೆದು ಎಸಿಬಿ ರಚಿಸಿತ್ತು. ಇದನ್ನು ರದ್ದುಗೊಳಿಸಿ ಹೈಕೋರ್ಟ್‌ ವಿಭಾಗೀಯ ಪೀಠ ಆಗಸ್ಟ್‌ 11ರಂದು ತೀರ್ಪು ನೀಡಿತ್ತು. 

AV Eye Hospital ad
ನಿಮಗೆ ಏನು ಅನ್ನಿಸ್ತು?
0 ವೋಟ್
eedina app