ಒಂದು ನಿಮಿಷದ ಓದು | ತೃಣಮೂಲ ಕಾಂಗ್ರೆಸ್‌ ಸಂಸದ ಕಾರು ಡಿಕ್ಕಿ; ಮಗು ಸಾವು

child death

ಪಶ್ಚಿಮಬಂಗಾಳದ ಮುರ್ಷಿದಾಬಾದ್‌ನಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸಂಸದರ ಕಾರು ಹರಿದು ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬುಧವಾರ ಸಂಜೆ ಈ ಅವಘಡ ಸಂಭವಿಸಿದ್ದು, ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಬು ತಾಹೆರ್ ಖಾನ್ ಅವರ ಕಾರು ಮಗುವಿನ ಮೇಲೆ ಹರಿದಿದ್ದು, ಮೃತ ಮಗುವಿನ ಪೋಷಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

ಈ ಕುರಿತು ಆಸ್ಪತ್ರೆಯ ಹೊರಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂಸದ ಖಾನ್, “ಇದ್ದಕ್ಕಿದ್ದಂತೆ ಐದಾರು ವರ್ಷದ ಮಗು ಕಾರಿನ ಹಿಂಭಾಗ ಬಂದದ್ದರಿಂದ ಅಪಘಾತವಾಯಿತು. ನಾವೇ ಮಗುವನ್ನು ಕರೆತಂದು ಆಸ್ಪತ್ರೆಗೆ ಸೇರಿಸಿದ್ದೇವೆ" ಎಂದು ಹೇಳಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app