ಸಚಿವ ಸುಧಾಕರ್‌ಗೆ ಸಮನ್ಸ್‌; ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಆದೇಶಿಸಿದ ನ್ಯಾಯಾಲಯ

sudhakar
  • ಆಂಜನೇಯರೆಡ್ಡಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರು
  • ಸಚಿವರ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ್ದ ಆಂಜನೇಯರೆಡ್ಡಿ

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಅವರಿಗೆ ಸಮನ್ಸ್‌ ಜಾರಿ ಮಾಡಿದೆ.

ಸಚಿವ ಸುಧಾಕರ್‌ ವಿರುದ್ಧ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್ ಆಂಜನೇಯ ರೆಡ್ಡಿ ಅವರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ಸಮನ್ಸ್‌ ಜಾರಿಗೊಳಿಸಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಂದಿನ ಶಾಸಕ ಕೆ ಸುಧಾಕರ್ ಅವರು ನೇಮಕಗೊಂಡಿದ್ದರು. ಆಗ, ಆಂಜನೇಯ ರೆಡ್ಡಿಯವರು, ಸುಧಾಕರ್‌ ಅವರ ಅರ್ಹತೆ ಮತ್ತು ಮಾನದಂಡ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟು ಅದನ್ನು ಪರಿಗಣಿಸಿ ಸರ್ಕಾರಕ್ಕೆ ನೋಟೀಸು ನೀಡಿತ್ತು. ಆ ನಂತರ ಸುಧಾಕರ್‌ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆ ಸಂದರ್ಭದಲ್ಲಿ ಸುಧಾಕರ್‌, "ರೈತರಿಗೆ ಕಳ್ಳಬಟ್ಟಿ ಕುಡಿಸಿ ಜೈಲು ಸೇರಿದ್ದ ವ್ಯಕ್ತಿ ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ" ಎಂದು ಆಂಜನೇಯ ರೆಡ್ಡಿ ವಿರುದ್ಧ ಆರೋಪಿಸಿದ್ದರು. 

"ಸುಧಾಕರ್‌ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ" ಎಂದು ಆರೋಪಿಸಿ ಆಂಜನೇಯರೆಡ್ಡಿ ಅವರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. 

ಈ ಸುದ್ದಿ ಓದಿದ್ದೀರಾ?: ಚಿಲುಮೆ ವೋಟರ್ ಗೇಟ್ ಅಕ್ರಮ | ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಜಾಗೆ ಕಾಂಗ್ರೆಸ್ ಆಗ್ರಹ

ಮಾನನಷ್ಟ ಪ್ರಕರಣವನ್ನು ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಈ ಆಧಾರದಲ್ಲಿ ಆಂಜನೇಯ ರೆಡ್ಡಿ ಅವರು ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ನಿಮಗೆ ಏನು ಅನ್ನಿಸ್ತು?
1 ವೋಟ್
Image
av 930X180