ಒಂದು ನಿಮಿಷದ ಓದು | ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಪೌಲ್;‌ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ

ADGP Amrit Paul
  • ಬಂಧನಕ್ಕೂ ಮುಂಚೆಯಿಂದಲೂ ಖಿನ್ನತೆಗೆ ಒಳಗಾಗಿದ್ದರಂತೆ ಪೌಲ್‌
  • ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಪೌಲ್‌ ಅವರಿಗೆ ಚಿಕಿತ್ಸೆ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಎಡಿಜಿಪಿ ಅಮೃತ್‌ ಪೌಲ್‌ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಜೈಲು ಅಧಿಕಾರಿಗಳು ಅವರಿಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪೌಲ್ ಅವರು ಬಂಧನಕ್ಕೂ ಮುಂಚೆಯಿಂದಲೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಇದೀಗ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಡಿ ಅವರು ಜೈಲು ಸೇರಿದ್ದು, ಮತ್ತಷ್ಟು ಖಿನ್ನತೆಗೆ ಒಳಗಾಗಿದ್ದಾರೆ. 

ಈ ಸುದ್ದಿ ಓದಿದ್ದೀರಾ: ಪಿಎಸ್‌ಐ ಅಕ್ರಮ | ಆರೋಪಿಗಳ ಬಂಧನಕ್ಕೂ ಮುನ್ನ ಅಣಕು ಪರೀಕ್ಷೆ

545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿ ಜೊತೆ ಸೇರಿ ಅಮೃತ್ ಪೌಲ್ ಅಕ್ರಮ ಎಸಗಿದ್ದಾರೆ ಎಂಬ ಆರೋಪವಿದೆ. ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್‌ ಪೌಲ್‌ ಹೆಸರನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಮೃತ್‌ ಪೌಲ್‌ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. 

ನಿಮಗೆ ಏನು ಅನ್ನಿಸ್ತು?
0 ವೋಟ್