ಪೆನ್ನಾರ್‌ ಜಲ ವಿವಾದ | ನ್ಯಾಯಾಧೀಕರಣ ರಚನೆ ಅವಶ್ಯ; ಸುಪ್ರೀಂಕೋರ್ಟಿಗೆ ಕೇಂದ್ರ ಮಾಹಿತಿ

  • ಮಾರ್ಕಂಡೇಯ ಜಲಾಶಯ ನಿರ್ಮಾಣದ ವಿರುದ್ಧ ಸುಪ್ರೀಂಕೋರ್ಟಿಗೆ ಅರ್ಜಿ
  • ಕರ್ನಾಟಕ ಸರ್ಕಾರ, ಕೇಂದ್ರದ ವಿರುದ್ಧ ಅರ್ಜಿ ಸಲ್ಲಿಸಿರುವ ತಮಿಳುನಾಡು

"ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಾಧೀಕರಣ ರಚನೆಯ ಅವಶ್ಯವಿದೆ" ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ತಿಳಿಸಿದೆ.

ಮಾರ್ಕಂಡೇಯ ಜಲಾಶಯ ನಿರ್ಮಾಣದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ನಿಲುವನ್ನು ನ್ಯಾಯಪೀಠಕ್ಕೆ ತಿಳಿಸಿದೆ. 

Eedina App

"ಮಾರ್ಕಂಡೇಯ ಜಲಾಶಯ ನಿರ್ಮಾಣ ಮಾಡುವುದರಿಂದ ಪೆನ್ನಾರ್‌ ನದಿಯಿಂದ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ತಡೆ ನೀಡಬೇಕು" ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಇಂದು ನ್ಯಾ. ಎಂ ಆರ್‌ ಶಾ ನೇತೃತ್ವ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು. 

ಈ ವೇಳೆ ವಾದ ಮಂಡಿಸಿದ ಕೇಂದ್ರದ ಪರ ವಕೀಲರು, "ತಮಿಳುನಾಡು- ಕರ್ನಾಟಕದ ಮಧ್ಯೆ ಸಂಧಾನ ಸಾಧ್ಯವಿಲ್ಲ. ನ್ಯಾಯಾಧೀಕರಣದ ಮೂಲಕ ವಿವಾದ ಬಗೆಹರಿಸಿದರೆ ಉತ್ತಮ" ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನ್ಯಾಯಾಧೀಕರಣ ರಚನೆ ಬಗ್ಗೆ ನಾಲ್ಕು ವಾರಗಳಲ್ಲಿ ತಿಳಿಸುವಂತೆ ಕೇಂದ್ರಕ್ಕೆ ಸೂಚಿಸಿದ್ದು, ಡಿ.14ಕ್ಕೆ ವಿಚಾರಣೆ ಮುಂದೂಡಿದೆ. 

AV Eye Hospital ad

ಕರ್ನಾಟಕ ಸರ್ಕಾರ ಹೇಳುವುದೇನು?

ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ರಾಜ್ಯವು ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣ, ಯಲ್ಲಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆ ಕೆರೆಯವರೆಗೆ ಕಾಮಗಾರಿ, ಬ್ಯಾಳಹಳ್ಳಿ ಗ್ರಾಮದ ಬಳಿಯ ಪೊನ್ನೆಯಾರ್ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ 2018ರ ಮೇ 18ರಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟಿನಲ್ಲಿ ದಾವೆ ಹೂಡಿತ್ತು. ಈ ದಾವೆ ಸಂಬಂಧ ಕರ್ನಾಟಕವು ಲಿಖಿತ ಆಕ್ಷೇಪಣೆಗಳನ್ನು ಸಲ್ಲಿಸಿದೆ. ಇದಕ್ಕೆ ತಮಿಳುನಾಡು ಸರ್ಕಾರ ಪ್ರತ್ಯುತ್ತರ ನೀಡಿದೆ. 

ಬುಧವಾರ, ಈ ಪ್ರಕರಣವು ಸುಪ್ರೀಂಕೋರ್ಟಿನಲ್ಲಿ ವಿಚಾರಣೆಗೆ ಬಂದಿತ್ತು. ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಟ್ ಅವರು ದಕ್ಷಿಣ ಪಿನಾಕಿನಿ ನದಿಯ ಪೆನ್ನಾರ್ ಕಣಿವೆಗೆ ಸಂಬಂಧಪಟ್ಟಂತೆ ಚರ್ಚಿತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಾತುಕತೆಗೆ ಸಮಿತಿ ರಚಿಸಲಾಗಿದೆ. ನ್ಯಾಯಾಧೀಕರಣ ರಚನೆ ಕುರಿತಂತೆ ಕೇಂದ್ರ ಸರ್ಕಾರವು ಅಂತಿಮ ನಿರ್ಣಯ ಕೈಗೊಳ್ಳಬೇಕಾಗಿರುವುದರಿಂದ ನಾಲ್ಕು ವಾರಗಳ ಕಾಲಾವಕಾಶ ಕೇಳಿದ್ದಾರೆ. ಈ ಪ್ರಕರಣವು 2022ರ ಡಿ.12ರಂದು ಮತ್ತೆ ವಿಚಾರಣೆಗೆ ಬರಲಿದೆ.

ಈ ಸುದ್ದಿ ಓದಿದ್ದೀರಾ?: ಕಥುವಾ ಸಾಮೂಹಿಕ ಅತ್ಯಾಚಾರ ಪ್ರಕರಣ | ಆರೋಪಿ ಶುಭಂ ಸಂಗ್ರಾ ಬಾಲಾಪರಾಧಿಯಲ್ಲ; ಸುಪ್ರೀಂಕೋರ್ಟ್

"ಈಗಾಗಲೇ ಈ ಸಮಿತಿಯು ಎರಡು ಸಭೆಗಳನ್ನು ನಡೆಸಿದೆ. ಸಭೆಯಲ್ಲಿ ನ್ಯಾಯಾಧಿಕರಣದ ರಚನೆ ಅಗತ್ಯವಿಲ್ಲ ಎಂದು ಕರ್ನಾಟಕ ಸರ್ಕಾರವು ಪ್ರತಿಪಾದಿಸಿದೆ. ಇನ್ನು ಮುಂದೆಯೂ ರಾಜ್ಯವು ಅದೇ ನಿಲುವನ್ನು ಮುಂದುವರಿಸಲಿದೆ" ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 

ನಿಮಗೆ ಏನು ಅನ್ನಿಸ್ತು?
0 ವೋಟ್
eedina app