ಜಮ್ಮು-ಕಾಶ್ಮೀರ | 20,000 ಕೋಟಿ ರೂಪಾಯಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

PM MODI
  • 370ನೇ ವಿಧಿ ರದ್ದಾದ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ಮೊದಲ ಭೇಟಿ
  • ಪಲ್ಲಿಯಲ್ಲಿ ಪಂಚಾಯತ್‌ ರಾಜ್‌ ದಿನಾಚರಣೆ

ಜಮ್ಮು-ಕಾಶ್ಮೀರದಲ್ಲಿ ₹20,000 ಕೋಟಿ ವೆಚ್ಚದ ಸಂಪರ್ಕ ಮತ್ತು ವಿದ್ಯುತ್‌ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ನಲ್ಲಿ ಪಂಚಾಯತ್‌ ರಾಜ್‌ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೋದಿ, ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು (370ನೇ ವಿಧಿ) ರದ್ದುಗೊಳಿಸಿದ ನಂತರ, ಮೊದಲ ಬಾರಿಗೆ ಮೋದಿ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಈ ವರ್ಷದ ಪಂಚಾಯತ್ ರಾಜ್ ದಿನವನ್ನು ಜಮ್ಮು-ಕಾಶ್ಮೀರದಲ್ಲಿ ಆಚರಿಸಲಾಗುತ್ತಿರುವುದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ" ಎಂದು ಹೇಳಿದ್ದಾರೆ. 

"ಈ ಯೋಜನೆಗಳು ಜಮ್ಮು-ಕಾಶ್ಮೀರದ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಕಳೆದ 2-3 ವರ್ಷಗಳಲ್ಲಿ ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ ಹೊಸ ಆಯಾಮಗಳನ್ನು ರಚಿಸಲಾಗಿದೆ" ಪ್ರಧಾನಿ ಮೋದಿ ಹೇಳಿದ್ದಾರೆ.

1992ರ 73ನೇ ಸಂವಿಧಾನ ತಿದ್ದುಪಡಿ ಕಾಯಿದೆಯು ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಎಂಬ 3 ಹಂತದ ಪಂಚಾಯತ್ ರಾಜ್ ವ್ಯವಸ್ಥೆಗೆ ಅವಕಾಶ ಮಾಡಿಕೊಟ್ಟಿತು. ಈ ತಿದ್ದುಪಡಿ ಕಾಯಿದೆಯು 1993ರ ಏಪ್ರಿಲ್ 24 ರಂದು ರಾಷ್ಟ್ರಾದ್ಯಂತ ಅನುಷ್ಠಾನಕ್ಕೆ ಬಂದಿತು. ಈ ಹಿನ್ನೆಲೆಯಲ್ಲಿ ಪ್ರತೀ ವರ್ಷ ಏಪ್ರಿಲ್ 24ರಂದು 'ರಾಷ್ಟ್ರೀಯ ಪಂಚಾಯತ್ ರಾಜ್ ದಿನʼ ಎಂದು ಆಚರಿಸಲಾಗುತ್ತದೆ. 

75ನೇ ಸ್ವಾತಂತ್ರ್ಯ ವರ್ಷದ ಭಾಗವಾಗಿ ʻಆಜಾದಿ ಕಾ ಅಮೃತ್ ಮಹೋತ್ಸವʼ ಆಚರಿಸಲಾಗುತ್ತಿದೆ. ಇದರ ಭಾಗವಾಗಿ ದೇಶದ ಪ್ರತಿ ಜಿಲ್ಲೆಯಲ್ಲಿ 75 ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಮತ್ತು ಪುನರುಜ್ಜೀವನಗೊಳಿಸುವ 'ಅಮೃತ ಸರೋವರ ಮಿಷನ್' ಆರಂಭವಾಗಿದೆ. 

ಇದನ್ನು ಓದಿದ್ದೀರಾ?: ಅಲ್ಪಸಂಖ್ಯಾತ ವಿರೋಧಿ ನಿಲುವಿನಿಂದ ಆರ್ಥಿಕ ಹಿನ್ನಡೆ: ರಘುರಾಂ ರಾಜನ್ ಕಳವಳ

`ನಮ್ಮ ರೈತರು ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡು ಭೂಮಿ ತಾಯಿಯನ್ನು ರಾಸಾಯನಿಕಗಳಿಂದ ಮುಕ್ತಗೊಳಿಸಬೇಕು. ಇದರಿಂದ ಮಾನವಕುಲಕ್ಕೆ ಒಳ್ಳೆಯದಾಗಲಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡುವ ಅಗತ್ಯವಿದೆʼ ಎಂದು ಪ್ರಧಾನಿ ಕರೆ ನೀಡಿದ್ದಾರೆ. 

ನಿಮಗೆ ಏನು ಅನ್ನಿಸ್ತು?
0 ವೋಟ್