ಪಿಎಸ್‌ಐ ಅಕ್ರಮ | ಅಮೃತ್‌ ಪೌಲ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ADGP Amrit Paul
  • ಪೌಲ್‌ ಪ್ರಭಾವಿಯಾಗಿದ್ದು, ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ
  • ಅಮೃತ್ ಪೌಲ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್‌

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಯಾಗಿರುವ ಐಪಿಎಸ್‌ ಅಧಿಕಾರಿ, ಮಾಜಿ ಎಡಿಜಿಪಿ ಅಮೃತ್‌ ಪೌಲ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 52ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ. ‌

ಸಿಐಡಿ ಪರ ವಾದ ಮಂಡಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್‌, "ಪ್ರಕರಣದ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಅಮೃತ್‌ ಪೌಲ್‌ ಪ್ರಭಾವಿ ವ್ಯಕ್ತಿಯಾಗಿದ್ದು, ಅವರಿಗೆ ಜಾಮೀನು ನೀಡಿದರೆ ತನಿಖೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಸಿಸಿ ಕ್ಯಾಮೆರಾ ಪರಿಶೀಲನೆ ಇನ್ನೂ ಬಾಕಿ ಇದೆ" ಎಂದು ನ್ಯಾಯಾಲಯದ ಗಮನಕ್ಕೆ ತಂದರು. 

ಇದೇ ವೇಳೆ, ಈ ಹಿಂದೆ ಪ್ರಕರಣದ ಇತರೆ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿರುವುದನ್ನೂ ಅವರು ನ್ಯಾಯಾಲಯದ ಗಮನಕ್ಕೆ ತಂದರು.  

ಈ ಸುದ್ದಿ ಓದಿದ್ದೀರಾ?: ಆಪ್ತರ ಹೆಸರಿನಲ್ಲಿ ಅಮೃತ್‌ ಪೌಲ್‌ ಬೇನಾಮಿ ಆಸ್ತಿ ಸಂಪಾದನೆ ಆರೋಪ: ಸಿಐಡಿ ದಾಳಿ

ಏನಿದು ಪ್ರಕರಣ?

2021ರ ಅಕ್ಟೋಬರ್ 3ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳ 93 ಪರೀಕ್ಷಾ ಕೇಂದ್ರಗಳಲ್ಲಿ 545 ಅಭ್ಯರ್ಥಿಗಳು ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದವು. ಇದರಲ್ಲಿ ಪೊಲೀಸ್‌ ಅಧಿಕಾರಿಗಳು ಸೇರಿ ಘಟಾನುಘಟಿಗಳು ಭಾಗಿಯಾಗಿರುವ ದೂರುಗಳು ಕೇಳಿ ಬಂದಿದ್ದವು.

ಈ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದ್ದು, 40ಕ್ಕೂ ಅಧಿಕ ಮಂದಿಯನ್ನು ಬಂಧಿಸಿದೆ.      

ನಿಮಗೆ ಏನು ಅನ್ನಿಸ್ತು?
0 ವೋಟ್