ಒಂದು ನಿಮಿಷದ ಓದು| ಪಂಜಾಬ್‌; ನಾಲ್ವರು ಐಎಸ್‌ಐ ಉಗ್ರರ ಬಂಧನ

75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿ ಪೊಲೀಸರ ಸಹಾಯದಿಂದ ಪಾಕಿಸ್ತಾನದ ಆಂತರಿಕ ಗುಪ್ತಚರ ಸೇವೆ (ಐಎಸ್‌ಐ) ಬೆಂಬಲಿತ ಭಯೋತ್ಪಾದಕ ಘಟಕವನ್ನು ಭೇದಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಭಾನುವಾರ (ಆಗಸ್ಟ್‌ 14) ತಿಳಿಸಿದ್ದಾರೆ.

ಕಾರ್ಯಚರಣೆಯಲ್ಲಿ ಕೆನಡಾ ಮೂಲದ ಅರ್ಶ್ ದಲ್ಲಾ ಮತ್ತು ಆಸ್ಟ್ರೇಲಿಯಾ ಮೂಲದ ಗುರ್ಜಂತ್ ಸಿಂಗ್‌ಗೆ ಸಂಬಂಧಿಸಿದ ನಾಲ್ವರು ಪಾಕ್ ಐಎಸ್‌ಐ ಬೆಂಬಲಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ.

ಭಯೋತ್ಪಾದಕರಿಂದ 3 ಹ್ಯಾಂಡ್ ಗ್ರೆನೇಡ್‌ಗಳು (ಪಿ-86), ಒಂದು ಸುಧಾರಿತ ಸ್ಫೋಟಕ ಸಾಧನ (ಐಇಡಿ), ಎರಡು 9 ಎಂಎಂ ಪಿಸ್ತೂಲ್‌ಗಳು ಹಾಗೂ 40 ಲೈವ್ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಪಂಜಾಬ್ ಪೊಲೀಸರು ಮತ್ತು ದೆಹಲಿ ಪೊಲೀಸರು ಪಾಕಿಸ್ತಾನ ಮೂಲದ ಭಯೋತ್ಪಾದನಾ ಘಟಕವನ್ನು ಭೇದಿಸಲು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು.

"ಸ್ವಾತಂತ್ರ್ಯ ದಿನದ ಮುನ್ನ, ಪಂಜಾಬ್ ಪೊಲೀಸರು ಭಯೋತ್ಪಾದಕ ಕೃತ್ಯವೊಂದನ್ನು ತಪ್ಪಿಸಿದ್ದಾರೆ.  ದೆಹಲಿ ಪೊಲೀಸರ ಸಹಾಯದಿಂದ ಪಾಕ್ ಐಎಸ್‌ಐ ಬೆಂಬಲಿತ ಭಯೋತ್ಪಾದಕ ಘಟಕವನ್ನು ಭೇದಿಸಿದ್ದಾರೆ. ಕೆನಡಾ ಮೂಲದ ಅರ್ಶ್ ದಲ್ಲಾ ಮತ್ತು ಆಸ್ಟ್ರೇಲಿಯಾ ಮೂಲದ ಗುರ್ಜಂತ್ ಸಿಂಗ್‌ಗೆ ಸಂಬಂಧಿಸಿದ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ" ಎಂದು ಪಂಜಾಬ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್