ಒಂದು ನಿಮಿಷದ ಓದು | ಪುನೀತ್‌ ರಾಜ್‌ಕುಮಾರ್ ಹೆಸರಲ್ಲಿ ಅರಳಲಿದೆ ಲಾಲ್‌ಬಾಗ್‌ ಪುಷ್ಪ ಪ್ರದರ್ಶನ

ನಟ ಪುನೀತ್‌ ರಾಜಕುಮಾರ್ ಅವರ ಹೆಸರಿನಲ್ಲಿ 2022 ಆಗಸ್ಟ್‌ 5ರಿಂದ 15 ರವೆರೆಗೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ ಎಂದು ತೋಟಗಾರಿಕಾ ಇಲಾಖೆ ಮಾಹಿತಿ ನೀಡಿದೆ.

ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು ಪುನೀತ್‌ ರಾಜ್‌ಕುಮಾರ್ ಅವರಿಗೆ ಸಮರ್ಪಿಸುತ್ತಿರುವುದಾಗಿ ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸುದೀಪ್ ಅವಹೇಳನ; ಅಹೋರಾತ್ರ, ಚರಣ್‌ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

“ಡಾ. ರಾಜ್‌ಕುಮಾರ್ ಅವರ ಗಾಜನೂರ ಮನೆಯನ್ನು ಹೂಗಳಿಂದ ಅಲಂಕಾರ ಮಾಡಲಾಗುತ್ತದೆ. ಜೊತೆಗೆ ವಿದೇಶಗಳಿಂದ ಬರುವ ಹೂವುಗಳಿಂದ ಡಾ. ಪುನೀತ್‌ ರಾಜ್‌ಕುಮಾರ್ ಅವರ ಪ್ರತಿಮೆಗಳನ್ನು ಅಲಂಕರಿಸಲಾಗುತ್ತದೆ” ಎಂದು ಮುನಿರತ್ನ ಹೇಳಿದರು.

“ಪುನೀತ್‌ ರಾಜ್‌ಕುಮಾರ್ ಅವರಿಗೆ ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು ಅರ್ಪಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ದೇಶಗಲ ಹೂವುಗಳು ಇರಲಿದೆ. ಆಗಸ್ಟ್‌ 15ರ ನಂತರವೂ ಎರಡು ದಿನಗಳ ಕಾಲ ಫಲಪುಷ್ಪ ಪ್ರದರ್ಶನವನ್ನು ವಿಸ್ತರಿಸುವ ಬಗ್ಗೆ ಚಿಂತಿಸಲಾಗುತ್ತಿದೆ” ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ. 
 

ನಿಮಗೆ ಏನು ಅನ್ನಿಸ್ತು?
0 ವೋಟ್