ಸಿಇಟಿ ಫಲಿತಾಂಶ ಪ್ರಕಟ; ಫಲಿತಾಂಶ ನೋಡುವುದು ಹೇಗೆ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶಗಳನ್ನು ಇಂದು (ಶನಿವಾರ) 11 ಗಂಟೆಗೆ ಬಿಡುಗಡೆ ಮಾಡಿದೆ. 

ಈ ವರ್ಷ ಎರಡು ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಲು ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಹುಟ್ಟಿದ ದಿನಾಂಕವನ್ನು ನಮೂದಿಸಬೇಕಾಗುತ್ತದೆ.

ಸಿಇಟಿ ಫಲಿತಾಂಶವನ್ನು kea.kar.nic.in ಮತ್ತು cetonline.karnataka.gov.in ಈ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಿಕೊಳ್ಳಬಹುದು.

ಸಿಇಟಿ ಫಲಿತಾಂಶ ಪರಿಶೀಲಿಸಲು ಈ ಹಂತಗಳನ್ನು ಅನುಸರಿಸಿ
1.    ಮೊದಲು kea.kar.nic.in ಮತ್ತು cetonline.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ
2.    ನಂತರ ‘ಕೆಸಿಇಟಿ ಫಲಿತಾಂಶ 2020’ ಅನ್ನು ಆಯ್ಕೆ ಮಾಡಿಕೊಳ್ಳಿ
3.    ಅಗತ್ಯವಿರುವ ಎಲ್ಲ ಮಾಹಿತಿಯನ್ನು ನಮೂದಿಸಿ, ಸಲ್ಲಿಸು ಎಂಬ ಆಯ್ಕೆ ಮೇಲೆ ‘ಕ್ಲಿಕ್’ ಮಾಡಿ
4.    ನಂತರ 2020ರ ಸಿಇಟಿ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ
5.    ಫಲಿತಾಂಶವನ್ನು ಮುಂದಿನ ಉಪಯೋಗಕ್ಕಾಗಿ ಡೌನ್ಲೋಡ್ ಮಾಡಿಕೊಳ್ಳಿ ಅಥವಾ ಪ್ರಿಂಟ್‌ ಪ್ರತಿ ತೆಗೆದುಕೊಳ್ಳಿ.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180