ಶಿವಮೊಗ್ಗ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದವನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

 arrest
  • 2021ರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿ
  • ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ ಆರು ತಿಂಗಳ ಜೈಲು ಶಿಕ್ಷೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಎಂ ಎಚ್‌ ಮೊಹಮ್ಮದ್‌ ಎಂಬಾತ 2021ರ ಜೂನ್‌ 29 ರಂದು 13 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ?: ಪತ್ನಿಯನ್ನು ಇತರೆ ಮಹಿಳೆಯರೊಂದಿಗೆ ಹೋಲಿಸಿ, ನಿಂದಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವ್ಯಕ್ತಿ ಕೃತ್ಯವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಜೆ ಎಸ್‌ ಮೋಹನ್‌ ವ್ಯಕ್ತಿಗೆ ಶಿಕ್ಷೆ ವಿಧಿಸಿ ಆದೇಶಿಸಿದರು. 

ನಿಮಗೆ ಏನು ಅನ್ನಿಸ್ತು?
0 ವೋಟ್