
- ಝುಬೇರ್ ವಿರುದ್ಧ ಉತ್ತರಪ್ರದೇಶದಲ್ಲಿ ದೂರು ದಾಖಲಿಸಿದ್ದ ಭಗವಾನ್
- ಪತ್ರಕರ್ತಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಉತ್ತರಪ್ರದೇಶದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
BREAKING: SUPREME COURT GRANTS INTERIM BAIL TO #MohammedZubair IN UP POLICE FIR
— Live Law (@LiveLawIndia) July 8, 2022
ಜೂನ್ 1ರಂದು ಹಿಂದೂ ಶೇರ್ ಸೇನಾ ಸೀತಾಪುರ ಜಿಲ್ಲಾಧ್ಯಕ್ಷ ಭಗವಾನ್ ಶರಣ್ ದೂರು ನೀಡಿದ್ದರು. ದೂರಿನ ಮೇರೆಗೆ ಉತ್ತರಪ್ರದೇಶದಲ್ಲಿ ಝುಬೇರ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295 ಎ(ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ಟ್ವೀಟ್ಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಝುಬೇರ್ ಅವರನ್ನು ಜೂನ್ 27ರಂದು ದೆಹಲಿ ಪೊಲೀಸರು ಬಂಧಿಸಿದ್ದರು.
ಈ ಸುದ್ದಿ ಓದಿದ್ದೀರಾ?: ತೀಸ್ತಾರನ್ನು ಬೆಂಬಲಿಸುತ್ತಾ ನಾಗರಿಕ ಪ್ರತಿರೋಧವನ್ನು ಸಶಕ್ತಗೊಳಿಸಬೇಕಾಗಿದೆ: ಕೆ ಪಿ ಸುರೇಶ
ಝುಬೇರ್ ಅವರ ವಿರುದ್ಧ ದೆಹಲಿ ಪೊಲೀಸರು, ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ) ಮತ್ತು 201 (ಸಾಕ್ಷ್ಯ ನಾಶ) ಹಾಗೂ ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯ ಸೆಕ್ಷನ್ 35ರ ಹೊಸ ನಿಬಂಧನೆಗಳಡಿ ಪ್ರಕರಣ ದಾಖಲಿಸಿದ್ದಾರೆ.
ಜಾಮೀನು ಸಿಕ್ಕರು ಜೈಲಿನಲ್ಲಿರಬೇಕಾದ ಝುಬೇರ್
ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಝುಬೇರ್ ಅವರಿಗೆ ಜಾಮೀನು ಮಂಜೂರಾಗಿದೆ. ಆದರೆ ದೆಹಲಿಯಲ್ಲಿ ದಾಖಲಾದ ಪ್ರಕರಣದಲ್ಲಿ ಜಾಮೀನು ದೊರೆಯದ ಕಾರಣ ಝುಬೇರ್ ಅವರು ಬಂಧನದಲ್ಲಿಯೇ ಇರುತ್ತಾರೆ.
ಜಾಮೀನು ಮಧ್ಯಂತರ ಆದೇಶವಾಗಿದ್ದು, ಐದು ದಿನಗಳ ಬಳಿಕ ನ್ಯಾಯಾಲಯ ವಿಚಾರಣೆ ನಡೆಸಲಿದೆ.
ಟ್ವೀಟ್ ಮಾಡದಂತೆ ಮತ್ತು ದೆಹಲಿಯನ್ನು ತೊರೆಯದಂತೆ ಷರತ್ತುಗಳನ್ನು ವಿಧಿಸಿ, ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.