ಪಿಎಫ್‌ಐ ನಿಷೇಧ ಪ್ರಶ್ನಿಸಿ ರಿಟ್‌ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

  • ಪಿಎಫ್‌ಐ ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣವಿಲ್ಲ
  • ಪಿಎಫ್‌ಐ ನಿಷೇಧಿಸಿದ್ದಕ್ಕೆ ಸಕಾರಣ ನೀಡಬೇಕಿತ್ತು ಎಂದ ಅರ್ಜಿದಾರ

ʻಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾʼ (ಪಿಎಫ್‌ಐ) ನಿಷೇಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ರಿಟ್‌ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ.

2022ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆ ನಿಷೇಧಿಸಿದ್ದನ್ನು ಪ್ರಶ್ನಿಸಿ ಕರ್ನಾಟಕದ ಪಿಎಫ್ಐ ಅಧ್ಯಕ್ಷ ನಾಸೀರ್ ಅಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ ಸೋಮವಾರ ವಿಚಾರಣೆ ನಡೆಸಿತು. 

Eedina App

ಅರ್ಜಿದಾರ ನಾಸೀರ್‌ ಅಲಿ ಪರ ವಕೀಲ ಜಯಕುಮಾರ್‌ ಎಸ್‌ ಪಾಟೀಲ್‌ ವಾದ ಮಂಡಿಸಿ, "ಪಿಎಫ್‌ಐ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಆದರೆ, ಪಿಎಫ್‌ಐ ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣವಿಲ್ಲ. ಪಿಎಫ್‌ಐ ಸಂಘಟನೆ ಮೇಲೆ ಏಕಾಏಕಿ ನಿರ್ಬಂಧ ಹೇರಿದ್ದಕ್ಕೆ ಕಾರಣ ನೀಡಬೇಕಿತ್ತು. ಆದರೆ, ಚರ್ಚಿಸಲೂ ಅವಕಾಶ ನೀಡದೆ ನಿಷೇಧ ಹೇರಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಯುಎಪಿಎ(ದೇಶದ್ರೋಹ) ಕಾಯಿದೆಗೆ ವಿರುದ್ಧವಾಗಿದೆ" ಎಂದರು. 

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, "ಪಿಎಫ್ಐ ಸಂಘಟನೆಯಿಂದ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿದ್ದವು. ಜತೆಗೆ, ಇದರಿಂದ ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳು ಹೆಚ್ಚುತ್ತಿದ್ದವು. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿತ್ತು. ಈ ಕಾರಣಗಳಿಂದಲೇ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದೆ" ಎಂದರು.

AV Eye Hospital ad

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. 

ಸೆ.27ರಂದು ಪಿಎಫ್‌ಐ ಮತ್ತು ಅದರ ಸಹ ಸಂಘಟನೆಗಳಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ರಿಹಾಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್), ನ್ಯಾಷನಲ್‌ ವುಮೆನ್ಸ್‌ ಫ್ರಂಟ್‌ (ಎನ್‌ಡಬ್ಲ್ಯೂಎಫ್‌), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸಂಘಟನೆಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. 

ಈ ಸುದ್ದಿ  ಓದಿದ್ದೀರಾ?: ಬೆಂಗಳೂರು | ವೀಕೆಂಡ್ ಡಿಜೆ ಪಾರ್ಟಿ ಹೆಸರಲ್ಲಿ ಉಳ್ಳವರ ಚೆಲ್ಲಾಟ; ವಾಹನ ಸವಾರರಿಗೆ ಪ್ರಾಣ ಸಂಕಟ

ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ್ದ ಪ್ರಕಟಣೆಯಲ್ಲಿ, "ಪಿಎಫ್‌ಐನ ಕೆಲ ಸಂಸ್ಥಾಪಕರು ನಿಷೇಧಿತ ಸಂಘಟನೆಗಳಾದ ʼಸ್ಟೂಡೆಂಟ್ಸ್‌ ಇಸ್ಲಾಮಿಕ್‌ ಮೂವ್‌ಮೆಂಟ್‌ ಆಫ್‌ ಇಂಡಿಯಾʼ (ಸಿಮಿ) ಮತ್ತು ʼಜಮಾತ್‌-ಉಲ್‌-ಮುಜಾಹಿದ್ದೀನ್‌ ಬಾಂಗ್ಲಾದೇಶʼ (ಜೆಎಂಬಿ)ದ ಜತೆ ಸಂಪರ್ಕ ಹೊಂದಿದೆ" ಎಂದು ಕೇಂದ್ರ ಸರ್ಕಾರ ಆರೋಪಿಸಿತ್ತು. 

ನಿಮಗೆ ಏನು ಅನ್ನಿಸ್ತು?
0 ವೋಟ್
eedina app