ಕೋಮುಗಲಭೆ ಹುಟ್ಟು ಹಾಕುವ ಶಾಸಕ ಸಿ ಟಿ ರವಿ ವಿರುದ್ಧ ಪ್ರಕರಣ ದಾಖಲಾಗಲಿ: ಡಿ ಕೆ ಶಿವಕುಮಾರ್‌

D K shivakumar
  • ʼಸಿದ್ದರಾಮಯ್ಯ ಕಾಲದಲ್ಲಿ ಹಿಂದೂಗಳ ಹತ್ಯೆ ಆಗುತ್ತದೆ ಎಂದು ಯಾವ ಆಧಾರದಲ್ಲಿ ಸಿ ಟಿ ರವಿ ಹೇಳುತ್ತಾರೆ?ʼ
  • ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ; ಮೊದಲು ಅದನ್ನು ಸ್ವಚ್ಛ ಮಾಡಿಕೊಳ್ಳಿ: ಡಿ ಕೆ ಶಿವಕುಮಾರ್

"ಸಿದ್ದರಾಮಯ್ಯ ಅವಧಿಯಲ್ಲಿ ಹಿಂದೂಗಳ ಹತ್ಯೆ ಆಗುತ್ತದೆ ಎಂದು ಯಾವ ಆಧಾರದಲ್ಲಿ ಸಿ ಟಿ ರವಿ ಹೇಳಿದ್ದಾರೆ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸ ನಡೆದಿದೆ. ಭ್ರಷ್ಟಾಚಾರ, ಮತಗಳ್ಳತನ ಕೇಸ್ ಮುಚ್ಚಿ ಹಾಕಲು ಇಂತಹ ಹೇಳಿಕೆ ನೀಡಲಾಗುತ್ತಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹರಿಹಾಯ್ದರು.

“ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆರೋಪಿಸಿದ್ದರು. ಈ ವಿಚಾರವಾಗಿ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರು ಹಳ್ಳಿಗಳಲ್ಲಿ ಕೋಮುಗಲಭೆ ಹುಟ್ಟು ಹಾಕುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೊದಲು ಶಾಸಕ ಸಿ ಟಿ ರವಿ ವಿರುದ್ಧ ಪ್ರಕರಣ ದಾಖಲಾಗಬೇಕು” ಎಂದರು.

Eedina App

ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ ಎಂದು ಸಚಿವ ಶ್ರೀರಾಮುಲು ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ, “ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ.  ಶ್ರೀರಾಮುಲು ಅಣ್ಣನ ವಿಚಾರ ಎಲ್ಲರಿಗೂ ಗೊತ್ತಿದೆ. ರಾಜ್ಯದ ಜನರಿಗೆ ಕುರ್ಚಿ ಕೊಡಿಸಬೇಕೆಂಬುದು ನಮ್ಮ ಬಯಕೆ. ಕುರ್ಚಿ ಕೊಡುವುದು ರಾಜ್ಯದ ಜನ. ರಾಜ್ಯದ ಜನರಿಗೆ ಉತ್ತಮ ಆಡಳಿತದ ಭರವಸೆ ಮೂಡಿಸುತ್ತಿದ್ದೇವೆ” ಎಂದರು.

ನಿಮಗೆ ಏನು ಅನ್ನಿಸ್ತು?
1 ವೋಟ್
eedina app