ಸಿಎಂ ಬದಲಾವಣೆ ಚರ್ಚೆಯಲ್ಲಿ ಯಾವುದೇ ಹುರುಳಿಲ್ಲ: ಬಸವರಾಜ ಬೊಮ್ಮಾಯಿ

Basavaraj Bommai
  • ಮುಖ್ಯಮಂತ್ರಿ ಬದಲಾವಣೆ ಕುರಿತಾದ ಕಾಂಗ್ರೆಸ್‌ನ ಟ್ವೀಟ್‌ ಹೊಸತಲ್ಲ
  • ಮುಂದಿನ ದಿನಗಳಲ್ಲಿ ಮತ್ತೆ ಎರಡು ಗಂಟೆ ಹೆಚ್ಚು ಕೆಲಸ ಮಾಡುತ್ತೇನೆ

ರಾಜ್ಯದಲ್ಲಿ ಹಬ್ಬಿರುವ ಮುಖ್ಯಮಂತ್ರಿ ಬದಲಾವಣೆ ವದಂತಿ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಕಾಂಗ್ರೆಸ್‌ನ ಟ್ವೀಟ್‌ ಹೊಸತಲ್ಲ. ಕಾಂಗ್ರೆಸ್‌ನವರ ಮನಸ್ಸಲ್ಲಿಯೇ ಅತಂತ್ರವಿದೆ” ಎಂದು ಅವರು ಕಿಡಿಕಾರಿದರು. 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸತ್ಯ ಏನು ಎಂದು ನನಗೆ ತಿಳಿದಿದೆ. ಈ ಚರ್ಚೆಯಲ್ಲಿ ಯಾವುದೇ ಹುರುಳಿಲ್ಲ. ಇದರಿಂದ ನನ್ನ ನಿರ್ಣಯಗಳು ಗಟ್ಟಿಯಾಗುತ್ತವೆ. ಮುಂಬರುವ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಎರಡು ಗಂಟೆ ಹೆಚ್ಚು ಕೆಲಸ ಮಾಡುತ್ತೇನೆ. ಪಕ್ಷದ ಬಲವರ್ಧನೆ ಮತ್ತು ಜನರ ಒಳಿತಿಗಾಗಿ ಶ್ರಮಿಸುತ್ತೇನೆ" ಎಂದರು. 

ಈ ಸುದ್ದಿ ಓದಿದ್ದೀರಾ?: ಸರ್ವೋಚ್ಛ ನ್ಯಾಯಾಲಯದ ನಿಯಮ ಮೀರಿ ‘ಬದಲಿ ನಿವೇಶನ’ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಸರ್ಕಾರದ ನಿಯಮದಂತೆ ಈದ್ಗಾ ಮೈದಾನದಲ್ಲಿ ಕಾರ್ಯಕ್ರಮ

ಇದೇ ಸಂದರ್ಭದಲ್ಲಿ ಈದ್ಗಾ ಮೈದಾನದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, "ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಸರ್ಕಾರದ ನೀತಿ ನಿಯಮಗಳ ಪ್ರಕಾರ ಅಲ್ಲಿ ಕಾರ್ಯಕ್ರಮ ನಡೆಸುವ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ" ಎಂದು ಹೇಳಿದರು. 

ಜಮೀರ್ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಅವರು, "ಯಾರು ಏನೇ ಹೇಳಿದರೂ ಅದು ನನಗೆ ಮುಖ್ಯವಲ್ಲ. ಕಾನೂನಿನ ಪ್ರಕಾರ ಏನು ಮಾಡಬೇಕೋ ಅದು ಆಗಲಿದೆ" ಎಂದರು. 

ನಿಮಗೆ ಏನು ಅನ್ನಿಸ್ತು?
0 ವೋಟ್