ಭಾರತ್‌ ಜೋಡೋ| ರಾಹುಲ್‌ ಗಾಂಧಿಗೆ ನನ್ನ ಮೆಚ್ಚುಗೆ ತಿಳಿಸಿ, ಸಮಾರಂಭಕ್ಕೆ ಬರಲು ಆಗುತ್ತಿಲ್ಲ: ಎಚ್‌ ಡಿ ದೇವೇಗೌಡ

H D Devegouda
  • ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ಆಹ್ವಾನಿಸಿದ್ದರು
  • ʼದ್ವೇಷ ಮತ್ತು ಹಿಂಸೆಯ ವಿರುದ್ಧ ರಾಹುಲ್‌ ಗಾಂಧಿ ಹೋರಾಡುತ್ತಿದ್ದಾರೆʼ

ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದಾರೆ. ಆದರೆ, ಸಮಾರಂಭದಲ್ಲಿ ಭಾಗವಹಿಸಲು ತಮಗೆ ಸಾಧ್ಯವಾಗುತ್ತಿಲ್ಲ ಎಂದು ದೇವೇಗೌಡರು ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಪತ್ರಕ್ಕೆ ಮರಳಿ ಪತ್ರ ಬರೆದಿರುವ ದೇವೇಗೌಡರು, “ನಾನು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುತ್ತಿಲ್ಲ. ನಾನು ವೈಯಕ್ತಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗದಿದ್ದರೂ ರಾಹುಲ್‌ ಗಾಂಧಿ ಅವರಿಗೆ ನನ್ನ ಬೆಂಬಲ ಇದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತ್ ಜೋಡೋ | ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ; ಸತ್ಯ ಮುಚ್ಚಿಡಲು ಸಾಧ್ಯವಿಲ್ಲ ಎಂದ ರಾಹುಲ್

“ರಾಹುಲ್‌ ಗಾಂಧಿ ಅವರು ದ್ವೇಷ ಮತ್ತು ಹಿಂಸೆಯ ವಿರುದ್ಧ ಹೋರಾಡುತ್ತಿದ್ದಾರೆ. ಜನರಲ್ಲಿ ಕೋಮು ಸೌಹಾರ್ದತೆಯ ಸಂದೇಶ ಬಿತ್ತಲು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,500 ಕಿಮೀ ನಡೆದಿದ್ದಾರೆ. ಅವರಿಗೆ ನನ್ನ ಮೆಚ್ಚುಗೆ ತಿಳಿಸಿ” ಎಂದು ಹೇಳಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರವನ್ನು ದೇವೇಗೌಡರು ಟ್ವೀಟ್‌ ಮಾಡಿದ್ದಾರೆ.

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಆಯೋಜಿಸಿರುವ ಭಾರತ್‌ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಜನವರಿ 10, 2023ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರಿಗೆ ಭಾರತ್‌ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದರು.

ಭಾರತದ ದಕ್ಷಿಣದ ತುದಿ ಕನ್ಯಾಕುಮಾರಿಯಿಂದ ಪ್ರಾರಂಭವಾದ ಭಾರತ್‌ ಜೋಡೋ ಯಾತ್ರೆಯ ಕೊನೆಯ ಹಂತ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿದೆ. ಜನವರಿ 30ರಂದು ಶ್ರೀನಗರದಲ್ಲಿ ಭಾರತ್‌ ಜೋಡೋ ಯಾತ್ರೆಯ ಸಮಾರೋಪವನ್ನು ಆಯೋಜಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ವಿವಿಧ 21 ಪಕ್ಷಗಳ ನಾಯಕರಿಗೆ ಪತ್ರ ಬರೆದು ಆಹ್ವಾನ ನೀಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app