
- ಭಾರತಿ ವಿಷ್ಣುವರ್ಧನ್ ಅವರ ಮನೆಯ ಗೃಹ ಪ್ರವೇಶದಲ್ಲಿ ಭಾಗಿಯಾದ ಬೊಮ್ಮಾಯಿ
- ಮೈಸೂರಿನಲ್ಲಿ ಉದ್ಘಾಟನೆಯನ್ನು ವೈಭವಾಯುತವಾಗಿ ಆಯೋಜನೆ: ಸಿಎಂ ವಿಶ್ವಾಸ
ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಷ್ಣುವರ್ಧನ್ ಕುಟುಂಬದ ನೂತನ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಾಯುತವಾಗಿ ಆಯೋಜಿಸಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಕನ್ನಡ ಮಾಸದಲ್ಲಿ ನೋಡಲೇಬೇಕಾದ ಕನ್ನಡ ಸಿನಿಮಾ | ಸೈನಿಕನ ಕೌಟುಂಬಿಕ ಜೀವನದ ಮೇಲೆ ಬೆಳಕು ಚೆಲ್ಲಿರುವ ಮುತ್ತಿನ ಹಾರ
ಚುಕ್ಕಿ ರೋಗ ತಡೆಗೆ ಕ್ರಮ
“ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ತಡೆಯಲು ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ಅವರಿಗೆ ಬೇಕಾದ ವಾಹನ, ಸಲಕರಣೆ ಒದಗಿಸಲು ಅನುದಾನ ಬಿಡುಗಡೆ ಯಾಗುತ್ತಿದೆ” ಎಂದು ತಿಳಿಸಿದರು.
ಶೃಂಗೇರಿಯಲ್ಲಿ ಆಸ್ಪತ್ರೆ
“ಶೃಂಗೇರಿಯಲ್ಲಿ ಸಸಜ್ಜಿತ ಸರ್ಕಾರಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿಲಾಗಿದೆ. ಸ್ಥಳದ ಸಮಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು” ಎಂದರು.