ಆಮ್‌ ಆದ್ಮಿ ಪಕ್ಷಕ್ಕೆ ಟೆನ್ನಿಸ್‌ ನಟ ಕೃಷ್ಣ ಸೇರ್ಪಡೆ

  • ಕರ್ನಾಟಕದಲ್ಲಿ ಆಮ್‌ ಆದ್ಮಿ ಪಕ್ಷ ಭದ್ರವಾಗಿ ಬೇರೂರುತ್ತಿದೆ
  • ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಮುಂತಾದ ಕ್ಷೇತ್ರಗಳಲ್ಲಿ ಸಾಧನೆ 

ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ ಅವರು ಗುರುವಾರ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿ, "ಕರ್ನಾಟಕದಲ್ಲಿ ಆಮ್‌ ಆದ್ಮಿ ಪಕ್ಷ ಭದ್ರವಾಗಿ ಬೇರೂರುತ್ತಿದೆ. ಸಿನಿಮಾ ಸಾಧಕರು, ದಕ್ಷ ಅಧಿಕಾರಿಗಳು, ರೈತ ನಾಯಕರು, ಸಮಾಜ ಸೇವಕರು, ವಕೀಲರು, ಉಪನ್ಯಾಸಕರು ಮುಂತಾದ ವಿವಿಧ ಕ್ಷೇತ್ರದ ಗಣ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ" ಎಂದು ಹೇಳಿದರು.

"ಜನಪ್ರಿಯ ನಟರಾದ ಟೆನ್ನಿಸ್ ಕೃಷ್ಣರವರ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ. ಸ್ವಚ್ಛ ರಾಜಕೀಯ ಹಾಗೂ ಪಾರದರ್ಶಕ ಆಡಳಿತವೇ ನಮ್ಮೆಲ್ಲರ ಧ್ಯೇಯವಾಗಿದ್ದು, ಇದನ್ನು ಸಾಧಿಸಲು ಒಗ್ಗಟ್ಟಿನಿಂದ ಶ್ರಮಿಸಲಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಾಮಳೆಗೆ ನೆಲಕ್ಕೊರಗಿದ ನೂರು ವರ್ಷದ ಮರ

ಬಳಿಕ ಮಾತನಾಡಿದ ಟೆನ್ನಿಸ್ ಕೃಷ್ಣರವರು, "ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಕ್ಷ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧಿಸಿ ತೋರಿಸಿರುವ ಎಎಪಿಯು ಈಗ ಪಂಜಾಬ್‌ನಲ್ಲೂ ಮೋಡಿ ಮಾಡುತ್ತಿದೆ" ಎಂದು ತಿಳಿಸಿದರು.

"ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್‌ ಆದ್ಮಿ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ" ಎಂದು ಹೇಳಿದರು.

ನಿಮಗೆ ಏನು ಅನ್ನಿಸ್ತು?
1 ವೋಟ್