- ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ
- ಕೆಲಸಕ್ಕೆ ಹೊರಟಿದ್ದ ವೇಳೆ ಅಪಘಾತ
ದ್ವಿಚಕ್ರ ವಾಹನಗಳೆರಡು (ಬೈಕ್-ಸ್ಕೂಟರ್) ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದರ್ಜೆ ಬೈಪಾಸ್ ಬಳಿ ನಡೆದಿದೆ.
ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ನೌಶಾದ್ (22) ಮೃತಪಟ್ಟ ದುರ್ದೈವಿ. ನೌಶಾದ್ ಪುತ್ತೂರು ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಸಮೀಪವಿರುವ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇವತ್ತು ಕೆಲಸಕ್ಕೆ ಹೊರಟ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ?: ಮೈಸೂರು | ಹಿಂದೂ ಮಹಿಳೆ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಮುಸ್ಲಿಂ ಬಾಂಧವರು
ಸಂಪ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.