ಏಕದಿನ ಸರಣಿ | ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

  • ಆಗಸ್ಟ್ 18ರಂದು ಮೊದಲ ಏಕದಿನ ಪಂದ್ಯ
  • ತಂಡಕ್ಕೆ ಮರಳಿದ ವೇಗಿ ದೀಪಕ್‌ ಚಾಹರ್‌

ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಜಿಂಬಾಬ್ವೆ ಪ್ರವಾಸಗೈಯ್ಯಲ್ಲಿರುವ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ನಿರೀಕ್ಷೆಯಂತೆಯೇ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಇತ್ತೀಚೆಗಷ್ಟೇ ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್‌ ಇಂಡಿಯಾವನ್ನು ಮುನ್ನಡೆಸಿದ್ದ ಶಿಖರ್‌ ಧವನ್‌, ನಾಯಕನಾಗಿ ಮುಂದುವರಿಯಲಿದ್ದಾರೆ.

ಟ್ವಿಟರ್‌ನಲ್ಲಿ  15 ಸದಸ್ಯರ ಟೀಮ್‌ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಮಾಜಿ ನಾಯಕ ವಿರಾಟ್‌ ಕೊಹ್ಲಿ ಆಡುತ್ತಾರೆ ಎಂಬ ಊಹಾಪೋಹಕ್ಕೆ ಬಿಸಿಸಿಐ ತೆರೆ ಎಳೆದಿದೆ.

ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ಮುಹಮ್ಮದ್‌ ಶಮಿ, ಜಸ್‌ಪ್ರೀತ್‌ ಬುಮ್ರಾ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವೇಗಿ ದೀಪಕ್‌ ಚಾಹರ್‌ ತಂಡಕ್ಕೆ ಮರಳಿದ್ದು, ಕನ್ನಡಿಗ ಪ್ರಸಿದ್ಧ್‌ ಕೃಷ್ಣಾಗೆ ಮತ್ತೆ ಅವಕಾಶ ಲಭಿಸಿದೆ.

Image

ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ:

ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್.

ಈ ಸುದ್ದಿ ಓದಿದ್ದೀರಾ ? :ಕಾಮನ್‌ವೆಲ್ತ್‌ ಗೇಮ್ಸ್‌ | ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ ಪೂಜಾರಿ

ಭಾರತ-ಜಿಂಬಾಬ್ವೆ ಸರಣಿಯ ವೇಳಾಪಟ್ಟಿ:

ಮೊದಲ ಏಕದಿನ ಪಂದ್ಯ - ಆಗಸ್ಟ್ 18 : ಹರಾರೆ ಸ್ಪೋರ್ಟ್ಸ್‌ ಕ್ಲಬ್

ಎರಡನೇ ಏಕದಿನ ಪಂದ್ಯ - ಆಗಸ್ಟ್ 20 : ಹರಾರೆ ಸ್ಪೋರ್ಟ್ಸ್‌ ಕ್ಲಬ್

ಮೂರನೇ ಏಕದಿನ ಪಂದ್ಯ - ಆಗಸ್ಟ್ 22  :  ಹರಾರೆ ಸ್ಪೋರ್ಟ್ಸ್‌ ಕ್ಲಬ್

ನಿಮಗೆ ಏನು ಅನ್ನಿಸ್ತು?
0 ವೋಟ್