ಬೆಂಗಳೂರು | ಸೆಪ್ಬಂಬರ್ 5ರಿಂದ ಫಿಬಾ U-18 ಮಹಿಳಾ ಏಷ್ಯನ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌

  • ಫಿಬಾ ಅಂಡರ್ 18 ಮಹಿಳಾ‌ ಏಷ್ಯನ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌
  • ಕಂಠೀರವ, ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯ

ಬೆಂಗಳೂರಿನಲ್ಲಿ ಸೆಪ್ಟೆಂಬರ್ 5ರಿಂದ 11 ರವರೆಗೆ ಫಿಬಾ ಅಂಡರ್ 18 ಮಹಿಳಾ‌ ಏಷ್ಯನ್ ಬಾಸ್ಕೆಟ್‌ಬಾಲ್ ಚಾಂಪಿಯನ್ ಶಿಪ್ ನಡೆಯಲಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಬಾಸ್ಕೆಟ್‌ಬಾಲ್ ಚಾಂಪಿಯನ್ ಶಿಪ್ ನಡೆಯಲಿದೆ. ಭಾರತ, ಜಪಾನ್, ಚೀನಾ, ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಒಟ್ಟು 16 ತಂಡಗಳು ಭಾಗಿಯಾಗಲಿವೆ. ಈ ಕ್ರೀಡಾಕೂಟದಲ್ಲಿ 16 ಅಂತಾರಾಷ್ಟ್ರೀಯ ತಂಡಗಳ 192 ಕ್ರೀಡಾಪಟುಗಳು, 96 ಅಧಿಕಾರಿಗಳು, 100 ಸ್ವಯಂ ಸೇವಕರು ಭಾಗವಹಿಸಲಿದ್ದಾರೆ. ವಿಜೇತರಾದ ಮೊದಲ 4 ತಂಡಗಳು 2023ರ ಜುಲೈನಲ್ಲಿ  ಸ್ಲೇನ್‌ನಲ್ಲಿ ನಡೆಯಲಿರುವ ಅಂಡರ್- 19 ಮಹಿಳೆಯರ ಫಿಬಾ ವಿಶ್ವ ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ.

ಈ ಕ್ರೀಡಾಕೂಟಕ್ಕೆ ಫೆಡರೇಷನ್ ಆಫ್ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ಮಾರ್ಗಸೂಚಿ ಪ್ರಕಾರ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಮ್ಮ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯೂ ಈ ಟೂರ್ನಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡುತ್ತಿದೆ. ಸಮಾರೋಪ ಸಮಾರಂಭ ಸೆಪ್ಟೆಂಬರ್ 11ರಂದು ನಡೆಯಲಿದ್ದು, ರಾಜ್ಯಪಾಲರು, ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಬೆಂಗಳೂರಿಗೆ ಈ ಕ್ರೀಡಾಕೂಟದ ಆತಿಥ್ಯ ವಹಿಸಲು ಅವಕಾಶ ಸಿಕ್ಕಿರುವುದು ನಮ್ಮೆಲ್ಲರಿಗೆ ಸಂತಸ ತಂದಿದೆ. ವಿಶ್ವದರ್ಜೆಯ ಯಾವುದೇ ಕ್ರೀಡಾಕೂಟವನ್ನು ಆಯೋಜಿಸಲು ನಾವು ಸಶಕ್ತರಾಗಿದ್ದೇವೆ ಎಂದು ಸಚಿವ ಡಾ ನಾರಾಯಣಗೌಡ ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ ? : ಜಿಂಬಾಬ್ವೆ ವಿರುದ್ಧ ಮೊದಲ ಏಕದಿನ ಪಂದ್ಯ: ಭಾರತಕ್ಕೆ ದಾಖಲೆಯ 10 ವಿಕೆಟ್‌ ಜಯ

ಇದೇ ವೇಳೆ ಇರಾನಿನಲ್ಲಿ ನಡೆಯಲಿರುವ ಫಿಬಾ ಅಂಡರ್ 18 ಪುರುಷರ ಬಾಸ್ಕೆಟ್‌ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಆಟಗಾರರಿಗೆ ಕಿಟ್‌ಗಳನ್ನು ನೀಡಿ ಶುಭ ಹಾರೈಸಿದರು. ಇಂಡಿಯನ್ ಬಾಸ್ಕೆಟ್ ಬಾಲ್ ಫೆಡರೇಷನ್ ಅಧ್ಯಕ್ಷ ಕೆ ಗೋವಿಂದರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಉಪಸ್ಥಿತರಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್