2ನೇ ಟಿ20 ಪಂದ್ಯ| ಪುಟಿದೇಳುವ ವಿಶ್ವಾಸದಲ್ಲಿ ವಿಂಡೀಸ್‌

  • ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ
  • ಗೆಲ್ಲಲೇಬೇಕಾದ ಒತ್ತಡದಲ್ಲಿ ವೆಸ್ಟ್‌ ಇಂಡೀಸ್

ವೆಸ್ಟ್‌ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಸೋಮವಾರ ರಾತ್ರಿ (ಆಗಸ್ಟ್‌ 1) ಸೇಂಟ್‌ ಕಿಟ್ಸ್‌ನ ವಾರ್ನರ್‌ ಪಾರ್ಕ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ 68 ರನ್‌ಗಳ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿದ್ದ ರೋಹಿತ್‌ ಶರ್ಮಾ ಬಳಗ, ಎರಡನೇ  ಪಂದ್ಯದಲ್ಲಿಯೂ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.

ಮತ್ತೊಂದೆಡೆ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡಿದ್ದ ಆತಿಥೇಯ ವಿಂಡೀಸ್, ಟಿ20 ಸರಣಿಯನ್ನಾದರೂ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಚುಟುಕು ಕ್ರಿಕೆಟ್‌ಗೆ ಹೆಸರುವಾಸಿಯಾದ ಪ್ರಮುಖ ಆಟಗಾರರನ್ನು ಹೊಂದಿರುವ ವಿಂಡೀಸ್‌, ಎರಡನೇ ಟಿ20 ಪಂದ್ಯದಲ್ಲಿ ಪುಟಿದೇಳುವ ವಿಶ್ವಾಸದಲ್ಲಿದೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ  ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಭಾರತ, ಆರಂಭಿಕ ಸೇರಿದಂತೆ ಎಲ್ಲ ವಿಭಾಗಗಳಲ್ಲೂ ಪ್ರಯೋಗ ನಡೆಸುತ್ತಿದೆ. ಕಳೆದ ಪಂದ್ಯದಲ್ಲಿ ನಾಯಕ ರೋಹಿತ್‌ ಶರ್ಮ ಸ್ಪಿನ್ ತ್ರಿವಳಿಗಳಾದ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಮತ್ತು ರವಿ ಬಿಷ್ಣೋಯ್‌ರನ್ನು ಕಣಕ್ಕಿಳಿಸುವ ಮೂಲಕ ಹೊಸ ಪ್ರಯೋಗಕ್ಕೆ ಮುಂದಾಗಿದ್ದರು. ಅರ್ಶ್‌ದೀಪ್ ಸಿಂಗ್, ಆಲ್‌ರೌಂಡರ್ ದೀಪಕ್ ಹೂಡಾ ಸೋಮವಾರದ  ಪಂದ್ಯದಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

Image
ರವಿ ಬಿಷ್ಣೋಯ್‌
ರವಿ ಬಿಷ್ಣೋಯ್‌

ಈ ಸುದ್ದಿ ಓದಿದ್ದೀರಾ ? : ಕಾಮನ್‌ವೆಲ್ತ್‌ ಗೇಮ್ಸ್‌ | ಪಾಕಿಸ್ತಾನ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

ದಿನೇಶ್ ಕಾರ್ತಿಕ್ ಫಿನಿಶರ್ ಪಾತ್ರದಲ್ಲಿ ಮಿಂಚುತ್ತಿರುವುದು ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಐಪಿಎಲ್‌ ಟೂರ್ನಿಯ ಬಳಿಕ ಅಮೋಘ ಫಾರ್ಮ್‌ನಲ್ಲಿರುವ ವಿಕೆಟ್‌ ಕೀಪರ್‌, ಬ್ಯಾಟ್ಸ್‌ಮನ್‌ ದಿನೇಶ್‌ ಕಾರ್ತಿಕ್‌, ವೀಂಡೀಸ್‌ ವಿರುದ್ಧದ ಮೊದಲ ಟಿ20 ಅಬ್ಬರಿಸಿದ್ದರು.  ಕೇವಲ 19 ಎಸೆತಗಳಲ್ಲಿ 2 ಸಿಕ್ಸರ್‌ ಮತ್ತು 4 ಬೌಂಡರಿಯೊಂದಿಗೆ 41 ರನ್ ಸಿಡಿಸಿ ಅಜೇಯರಾಗುಳಿದರು. 7ನೇ ವಿಕೆಟ್‌ಗೆ ಅಶ್ವಿನ್‌ ಜೊತೆ ಸೇರಿ 52 ರನ್‌ ಜೊತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 190ರ ಗಡಿ ದಾಟಿಸಿದ್ದರು.

ಸಂಭಾವ್ಯ ತಂಡ:

ಭಾರತ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್‌ ಕೀಪರ್‌), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್.

ವೆಸ್ಟ್ ಇಂಡೀಸ್: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್, ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಅಕೇಲ್ ಹೋಸೇನ್, ಓಬೆಡ್ ಮೆಕಾಯ್, ಹೇಡನ್ ವಾಲ್ಷ್ ಜೂನಿಯರ್.

ನಿಮಗೆ ಏನು ಅನ್ನಿಸ್ತು?
0 ವೋಟ್