ಏಕದಿನ ಸರಣಿ ʻಕ್ಲೀನ್‌ಸ್ವೀಪ್‌ʼ ಸಾಧನೆಯ ಬಳಿಕ ಟಿ20 ಸಮರ

  • ಲಾರಾ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ
  • ಕೆಎಲ್‌ ರಾಹುಲ್‌ ಸ್ಥಾನಕ್ಕೆ ಸಂಜು ಸ್ಯಾಮ್ಸನ್‌

ಭಾರತ ಮತ್ತು ವೆಸ್ಟ್‌ ಇಂಡೀಸ್‌ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯ  ಶುಕ್ರವಾರ ನಡೆಯಲಿದೆ. ಏಕದಿನ ಸರಣಿಯಲ್ಲಿ ದಾಖಲೆಯ ಕ್ಲೀನ್‌ ಸ್ವೀಪ್‌ ಸಾಧನೆಯ ಬಳಿಕ, 5 ಪಂದ್ಯಗಳ ಟಿ20 ಸರಣಿಯನ್ನೂ ವಶಪಡಿಸಿಕೊಳ್ಳಲು ಟೀಮ್‌ ಇಂಡಿಯಾ ಕಠಿಣ ಅಭ್ಯಾಸ ನಡೆಸಿದೆ. ತರೋಬದ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಿಗದಿಯಾಗಿದೆ. ಕೊನೆಯ 2 ಪಂದ್ಯಗಳ ಆತಿಥ್ಯ ಯುಎಸ್‌ಎ (ಫ್ಲೋರಿಡಾದ ಲಾಡ‌ ಹಿಲ್) ಪಾಲಾಗಿರುವುದು ವಿಶೇಷ. ಐದು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿ ಜುಲೈ 29ರಿಂದ ಆಗಸ್ಟ್‌ 7ರವರೆಗೆ ನಡೆಯಲಿದೆ.

ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಪ್ರಮುಖ ಆಟಗಾರರಾದ ನಾಯಕ ರೋಹಿತ್‌ ಶರ್ಮಾ, ವಿಕೆಟ್‌ ಕೀಪರ್‌ ರಿಷಭ್‌ ಪಂತ್‌, ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌ ಟಿ20 ಸರಣಿಗೆ ತಂಡಕ್ಕೆ ಮರಳಿದ್ದಾರೆ. ಆಸ್ಟ್ರೇಲಿಯದಲ್ಲಿ ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್‌ ನಡೆಯಲಿದ್ದು, ಇದಕ್ಕೂ ಮೊದಲು ಟೀಮ್‌ ಇಂಡಿಯಾ ಏಷ್ಯಾ ಕಪ್‌ ಟೂರ್ನಿ ಸೇರಿದಂತೆ ಸುಮಾರು 16 ಟಿ20 ಪಂದ್ಯಗಳನ್ನು ಆಡಲಿದೆ. ವಿಶ್ವಕಪ್‌ಗೆ ಬಲಿಷ್ಠ ತಂಡವನ್ನು ಕಟ್ಟುವಲ್ಲಿ ಗಮನ ಹರಿಸಿರುವ ಬಿಸಿಸಿಐ, ಸರಣಿಯಿಂದ ಸರಣಿಗೆ ಆಟಗಾರರನ್ನು ಬದಲಾಯಿಸಿ, ಪ್ರದರ್ಶನ ಗಮನಿಸುತ್ತಿದೆ.  

ಅದಾಗಿಯೂ ನಿರಂತರವಾಗಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿರುವ ಮಾಜಿ ನಾಯಕ ವಿರಾಟ್‌ ಕೊಹ್ಲಿ, ಜಸ್‌ಪ್ರೀತ್‌ ಬುಮ್ರಾ ಹಾಗೂ ಸ್ಪಿನ್ನರ್‌ ಯಜುವೇಂದ್ರ ಚಹಾಲ್‌ಗೆ ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಕೊಹ್ಲಿ ಸ್ಥಾನಕ್ಕೆ  ದೀಪಕ್ ಹೂಡಾ ಅಥವಾ ಶ್ರೇಯಸ್ ಅಯ್ಯರ್, ಯಜುವೇಂದ್ರ ಚಹಾಲ್‌ಗೆ ಬದಲಿಗೆ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌ ಆಯ್ಕೆಯಾಗುವ ಸಾಧ್ಯತೆ ಇದೆ.

ಆದರೆ, ಕೆಲ ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿಗೆ ತುತ್ತಾಗಿದ್ದ ಕೆಎಲ್‌ ರಾಹುಲ್‌ ಇನ್ನೂ ಪೂರ್ಣ ಪ್ರಮಾಣದಲ್ಲಿ ಫಿಟ್‌ ಆಗದೇ ಇರುವುದರಿಂದ, ಅವರ ಜಾಗದಲ್ಲಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ ಸ್ಥಾನ ಪಡೆದಿದ್ದಾರೆ. ಇತ್ತೀಚೆಗೆ ನಡೆದ 3 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಆಡಿದ್ದ ಸ್ಯಾಮ್ಸನ್‌, 3 ಇನ್ನಿಂಗ್ಸ್‌ಗಳಲ್ಲಿ 1 ಅರ್ಧಶತಕ ಬಾರಿಸಿದ್ದರು.

 ಈ ಸುದ್ದಿ ಓದಿದ್ದೀರಾ ? : ಕಾಮನ್‌ವೆಲ್ತ್‌ ಗೇಮ್ಸ್‌ | ಭಾರತದ ಮೊದಲ ದಿನದ ಸ್ಪರ್ಧೆಗಳ ವಿವರ

ಟಿ20 ಸರಣಿಯ ವೇಳಾಪಟ್ಟಿ

ಜುಲೈ 29: ಮೊದಲ ಏಕದಿನ. ಸ್ಥಳ:  ತರೋಬ

ಆಗಸ್ಟ್‌ 01: ಎರಡನೇ ಏಕದಿನ. ಸ್ಥಳ: ಬಾಸೆಟೆರೆ

ಆಗಸ್ಟ್‌ 2: ಮೂರನೇ ಏಕದಿನ. ಸ್ಥಳ: ಬಾಸೆಟೆರೆ

ಆಗಸ್ಟ್‌ 6: ನಾಲ್ಕನೇ ಏಕದಿನ.  ಲಾಡ್ ಹಿಲ್, ಫ್ಲೋರಿಡಾ

ಆಗಸ್ಟ್‌ 7: ಐದನೇ ಏಕದಿನ. ಲಾಡ್ ಹಿಲ್, ಫ್ಲೋರಿಡಾ

ಸಂಭಾವ್ಯ ತಂಡ

ಭಾರತ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್‌, ರಿಷಭ್ ಪಂತ್, ದಿನೇಶ್ ಕಾರ್ತಿಕ್, (ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌), ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲ್‌ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ವೆಸ್ಟ್‌ ಇಂಡೀಸ್‌: ನಿಕೋಲಸ್ ಪೂರನ್ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ), ಶಮರ್ ಬ್ರೂಕ್ಸ್, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಓಬೆಡ್ ಮೆಕಾಯ್, ಕೀಮೋ ಪಾಲ್, ರೊಮಾರಿಯೊ ಶೆಫರ್ಡ್, ಒಡೆವನ್ ಶೆಫರ್ಡ್, ಥಾಮಸ್, ಹೇಡನ್ ವಾಲ್ಷ್ ಜೂನಿಯರ್

ನಿಮಗೆ ಏನು ಅನ್ನಿಸ್ತು?
0 ವೋಟ್