ಟಿ20 ವಿಶ್ವಕಪ್‌ ಸೆಮಿಫೈನಲ್‌ | ಟಾಸ್‌ ಗೆದ್ದ ಇಂಗ್ಲೆಂಡ್‌; ಆಡುವ ಹನ್ನೊಂದರ ಬಳಗದ ಮಾಹಿತಿ ಇಲ್ಲಿದೆ

ಟಿ20 ವಿಶ್ವಕಪ್‌ನ ದ್ವಿತೀಯ ಸೆಮಿಫೈನಲ್‌ನಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌, ರೋಹಿತ್‌ ಬಳಗವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಅಡಿಲೇಡ್‌ನಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಭಾರತ ತಂಡ ದಿನೇಶ್‌ ಕಾರ್ತಿಕ್‌ರನ್ನು ಕೈಬಿಟ್ಟಿದ್ದು, ರಿಷಭ್‌ ಪಂತ್‌ ಅವರಿಗೆ ಸ್ಥಾನ ನೀಡಿದೆ. 

ಟಾಸ್‌ ಸೋತ ಬಳಿಕ ಮಾತನಾಡಿದ ಭಾರತದ ನಾಯಕ ರೋಹಿತ್‌ ಶರ್ಮಾ, ನಾವು ಮೊದಲು ಬ್ಯಾಟ್‌ ಮಾಡಲು ಇಚ್ಚಿಸಿದ್ದೆವು ಎಂದಿದ್ದಾರೆ.

Eedina App

ವಿಶೇಷವೆಂದರೆ ಅಡಿಲೇಡ್‌ ಮೈದಾನದಲ್ಲಿ ಇದುವರೆಗೆ ನಡೆದಿರುವ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಟಾಸ್‌ ಗೆದ್ದಿರುವ ತಂಡಗಳು ಪಂದ್ಯ ಗೆದ್ದ ಇತಿಹಾಸವಿಲ್ಲ. 

ಉಭಯ ತಂಡಗಳ ಆಡುವ ಹನ್ನೊಂದರ ಬಳಗ

ಭಾರತ ಇಲೆವೆನ್: ಕೆ.ಎಲ್. ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್‌ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮುಹಮ್ಮದ್ ಶಮಿ, ಅರ್ಷದೀಪ್ ಸಿಂಗ್

ಇಂಗ್ಲೆಂಡ್ : ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್

ನಿಮಗೆ ಏನು ಅನ್ನಿಸ್ತು?
1 ವೋಟ್
eedina app