ಭಾರತ - ಬಾಂಗ್ಲಾ ಕ್ರಿಕೆಟ್ ಸರಣಿಯಿಂದ ಟೀಮ್ ಇಂಡಿಯಾ ಪ್ರಮುಖ ಆಲ್‌ರೌಂಡರ್ ಔಟ್‌

Jadeja is unavailable for the series against Bangladesh
  • ಜಡೇಜ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ
  • ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆಗೊಳಗಿರುವ ಜಡೇಜ

ಆಲ್‌ರೌಂಡರ್ ರವೀಂದ್ರ ಜಡೇಜ ಮುಂದಿನ ತಿಂಗಳು ನಡೆಯಲಿರುವ ಬಾಂಗ್ಲಾದೇಶ ಎದುರಿನ ಕ್ರಿಕೆಟ್ ಸರಣಿಯಲ್ಲಿ ಆಡುವ ಭಾರತ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಕೆಲವು ತಿಂಗಳುಗಳ ಹಿಂದೆ ಅವರ ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಜಡೇಜ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಆಯ್ಕೆ ಸಮಿತಿಯವರು ಪರಿಗಣಿಸಿಲ್ಲ. ಬೆನ್ನುನೋವಿನಿಂದ ಬಳಲಿರುವ ಯಶ್ ದಯಾಳ್ ಅವರನ್ನೂ ತಂಡದಿಂದ ಕೈ ಬಿಡಲಾಗಿದೆ. 
 
ನ್ಯೂಝಿಲ್ಯಾಂಡ್‌ನಲ್ಲಿ ನಡೆಯಲಿರುವ ಏಕದಿನ ಸರಣಿ ಮತ್ತು ಬಾಂಗ್ಲಾದೇಶ ಏಕದಿನ ಸರಣಿಯಲ್ಲಿ ಆಡುವ ಭಾರತ ತಂಡಗಳನ್ನು ಬುಧವಾರ ಬಿಸಿಸಿಐ ಪ್ರಕಟಿಸಿದೆ.

ಈ ಸುದ್ದಿ ಓದಿದ್ದೀರಾ? ಏಕದಿನ ಕ್ರಿಕೆಟ್ ಸರಣಿ | ದಿಟ್ಟ ನಿರ್ಧಾರ ಕೈಗೊಳ್ಳುವೆ ಎಂದ ಕ್ಯಾಪ್ಟನ್ ಶಿಖರ್‌ ಧವನ್‌

ನ್ಯೂಝಿಲ್ಯಾಂಡ್‌ನಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದು, ಬಾಂಗ್ಲಾ ವಿರುದ್ಧದ ಸರಣಿಗೆ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದಾರೆ. ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ ಕೂಡ ಮರಳಲಿದ್ದಾರೆ.

ನ್ಯೂಝಿಲ್ಯಾಂಡ್‌ ಏಕದಿನ ಸರಣಿಗೆ:

ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯುಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪನಾಯಕ/ವಿಕೆಟ್‌ ಕೀಪರ್), ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್,  ಆರ್ಷದೀಪ್ ಸಿಂಗ್, ದೀಪಕ್ ಚಾಹರ್, ಉಮ್ರಾನ್ ಮಲಿಕ್

ಬಾಂಗ್ಲಾದೇಶ  ವಿರುದ್ಧ ಏಕದಿನ ಸರಣಿಗೆ:

ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್‌ ಕೀಪರ್), ಇಶಾನ್ ಕಿಶನ್, ಶಾಬಾಝ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180