ಮಹಿಳಾ ಟಿ20 ಏಷ್ಯಾಕಪ್‌ | 15 ಸದಸ್ಯರ ಭಾರತ ತಂಡ ಪ್ರಕಟ

  • ಅಕ್ಟೋಬರ್‌ 1ರಿಂದ ಬಾಂಗ್ಲಾದೇಶದಲ್ಲಿ ಮಹಿಳಾ ಟಿ20 ಏಷ್ಯಾ ಕಪ್‌
  • ರೌಂಡ್ ರಾಬಿನ್ ಮಾದರಿಯಲ್ಲಿ ಏಳು ತಂಡಗಳ ನಡುವೆ ಪಂದ್ಯ

ಅಕ್ಟೋಬರ್‌ 1ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿರುವ ಮಹಿಳಾ ಟಿ20 ಏಷ್ಯಾ ಕಪ್‌ ಟೂರ್ನಿಗೆ, 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕಳೆದ ವಾರ ಇಂಗ್ಲೆಂಡ್‌ ವಿರುದ್ಧ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ ಆಡಿದ್ದ ತಂಡವನ್ನೇ ಉಳಿಸಿಕೊಳ್ಳಲಾಗಿದೆ. ತನಿಯಾ ಭಾಟಿಯಾ ಮತ್ತು ಸಿಮ್ರಾನ್ ಬಹದ್ದೂರ್ ಅವರನ್ನು ಹೆಚ್ಚುವರಿ ಆಟಗಾತಿಯರನ್ನಾಗಿ ಹೆಸರಿಸಲಾಗಿದೆ.

ಆರು ಬಾರಿ ಏಷ್ಯಾ ಕಪ್‌ ಕಿರೀಟ ಗೆದ್ದಿರುವ ಭಾರತೀಯ ವನಿತಾ ತಂಡವನ್ನು ಹರ್ಮನ್‌ ಪ್ರೀತ್‌ ಕೌರ್‌ ಮುನ್ನಡೆಸಲಿದ್ದಾರೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ, ಶ್ರೀಲಂಕಾ ತಂಡದ ಸವಾಲನ್ನು ಎದುರಿಸಲಿದೆ. ಅಕ್ಟೋಬರ್‌ 7ರಂದು ನಡೆಯುವ ಮಹತ್ವದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ- ಪಾಕಿಸ್ತಾನ ಮುಖಾಮುಖಿಯಾಗಲಿವೆ.

Eedina App

ಆತಿಥೇಯ ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಥಾಯ್ಲೆಂಡ್‌ ಮಲೇಷ್ಯಾ, ಯುಎಇ ಸೇರಿದಂತೆ ಒಟ್ಟು ಏಳು ತಂಡಗಳು ರೌಂಡ್ ರಾಬಿನ್ ಮಾದರಿಯಲ್ಲಿ ಸ್ಪರ್ಧಿಸಲಿದ್ದು, ಅಗ್ರ-ನಾಲ್ಕು ತಂಡಗಳು ಸೆಮಿಫೈನಲ್ ಹಂತಕ್ಕೆ ಪ್ರವೇಶಿಸಲಿವೆ. ಅಕ್ಟೋಬರ್ 13ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 15ರಂದು ಚಾಂಪಿಯನ್‌ ಪಟ್ಟಕ್ಕಾಗಿ ಹೋರಾಟ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ ? : 17 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಇಂಗ್ಲೆಂಡ್‌ ತಂಡಕ್ಕೆ ಮೊದಲ ಗೆಲುವು

"ಅಕ್ಟೋಬರ್‌ 1ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿರುವ ಎಸಿಸಿ ಮಹಿಳಾ T20 ಚಾಂಪಿಯನ್‌ಶಿಪ್ 2022 ಟೂರ್ನಿಗೆ, ಅಖಿಲ ಭಾರತ ಮಹಿಳಾ ಆಯ್ಕೆ ಸಮಿತಿಯು ಭಾರತ ತಂಡವನ್ನು ಆಯ್ಕೆ ಮಾಡಿದೆ" ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಸಬ್ಬಿನೇನಿ ಮೇಘನಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ್ ರಾಣಾ, ದಯಾಳನ್ ಹೇಮಲತಾ, ಮೇಘನಾ ಸಿಂಗ್, ರೇಣುಕಾ ವಸ್ತ್ರಕರ್, ರಾಜೇಶ್ವರಿ ಗಾಯಕ್ವಾಡ್, ರಾಧಾ ಯಾದವ್, ಕೆ ಪಿ. ನವಗಿರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app