ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ |ಲಾರ್ಡ್ಸ್‌ನ ದಿ ಓವಲ್‌ ಕ್ರೀಡಾಂಗಣದಲ್ಲಿ ಫೈನಲ್‌

  • ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕ ತಂಡಗಳು ಅಗ್ರಸ್ಥಾನ
  • ಆಗಸ್ಟ್‌ನಲ್ಲಿ ಆರಂಭವಾಗಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ 

ಆಗಸ್ಟ್‌ನಲ್ಲಿ ಆರಂಭವಾಗಿರುವ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ ಪಂದ್ಯ 2023ರ ಮಾರ್ಚ್‌ ಅಂತ್ಯದಲ್ಲಿ ಇಂಗ್ಲೆಂಡ್‌ನ ದಿ ಓವಲ್‌ ಮೈದಾನದಲ್ಲಿ ನಡೆಯಲಿದೆ. ಈ ವಿಷಯ ಪ್ರಕಟಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ), ಇದೇ ವೇಳೆ, 2025ರ ಫೈನಲ್‌ ಪಂದ್ಯ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದೆ.

ಕಳೆದ ವರ್ಷ ಜೂನ್‌ನಲ್ಲಿ ಸೌತಾಂಪ್ಟನ್‌ನಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌, ವಿರಾಟ್‌ ಕೊಹ್ಲಿ ಬಳಗವನ್ನು 8 ವಿಕೆಟ್‌ಗಳ ಅಂತರದಲ್ಲಿ ಮಣಿಸಿ ಚಾಂಪಿಯನ್‌ ಆಗಿತ್ತು.

ಈ ಸುದ್ದಿ ಓದಿದ್ದೀರಾ ? : ಪ್ರೊ ಕಬಡ್ಡಿ ಲೀಗ್‌| 9ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ

"ಮುಂದಿನ ವರ್ಷದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಆಯೋಜನೆ ಮಾಡುತ್ತಿರುವುದು ಸಂತಸದ ವಿಷಯ. ಓವಲ್ ಕ್ರೀಡಾಂಗಣವು ಭವ್ಯ ಇತಿಹಾಸ ಹೊಂದಿದೆ. ಅಲ್ಲಿ ನಡೆಯುವ ಫೈನಲ್ ಪಂದ್ಯವೂ ವೈಭವಯುತವಾಗಿ ನಡೆಯುವುದು ಖಚಿತ" ಎಂದು ಐಸಿಸಿ  ಮುಖ್ಯ ಕಾರ್ಯನಿರ್ವಾಹಕ ಜೆಫ್ ಅಲರ್‌ಡೈಸ್‌ ತಿಳಿಸಿದ್ದಾರೆ.

ಡಬ್ಲ್ಯೂಟಿಸಿ ಫೈನಲ್‌ ನಡೆಯುವ ತಾಣಗಳನ್ನು ಘೋಷಿಸಲಾಗಿದೆಯಾದರೂ ಸಹ, ಪಂದ್ಯ ನಡೆಯುವ ನಿರ್ದಿಷ್ಟ ದಿನಾಂಕವನ್ನು ಪ್ರಕಟಿಸಿಲ್ಲ. ಸದ್ಯದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕ ತಂಡಗಳು ಅಗ್ರಸ್ಥಾನದಲ್ಲಿವೆ.

ನಿಮಗೆ ಏನು ಅನ್ನಿಸ್ತು?
0 ವೋಟ್