
- ಮೌಂಟ್ ಮೌಂಗನ್ಯುಯಿಯಲ್ಲಿ ಕಠಿಣ ಅಭ್ಯಾಸ ನಡೆಸುತ್ತಿರುವ ಭಾರತ
- ವೇಗಿ ಉಮ್ರಾನ್ ಮಲಿಕ್ ಇಂದು 11ರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ
ಬೇ ಓವಲ್ ಮೈದಾನದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯ ಇಂದು ನಡೆಯಲಿದ್ದು, ಈಗಾಗಲೇ ಮೊದಲ ಟಿ20 ಪಂದ್ಯ ಮಳೆಗೆ ಆಹುತಿಯಾಗಿದೆ.
ನಾಯಕ ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡ ಈಗಾಗಲೇ ಮೌಂಟ್ ಮೌಂಗನ್ಯುಯಿಯಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದೆ. ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದ ವೇಗಿ ಉಮ್ರಾನ್ ಮಲಿಕ್ ಇಂದು 11ರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ ಹೀನಾಯ ಸೋಲಿನ ಬಳಿಕ ನ್ಯೂಜಿಲೆಂಡ್ ಸವಾಲಿಗೆ ಸಜ್ಜಾದ ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆತಿಥೇಯರಿಗೆ ಕಠಿಣ ಪೈಪೋಟಿ ನೀಡಲು ಟೀಮ್ ಇಂಡಿಯಾದ ಯುವಕ ಬ್ಯಾಟರ್ಗಳು ಸಜ್ಜಾಗಿದ್ದಾರೆ.
ಪಂದ್ಯ ಆರಂಭ; ಮಧ್ಯಾಹ್ನ 12ಕ್ಕೆ (ಭಾರತೀಯ ಕಾಲಮಾನ)
ಸ್ಥಳ: ಮೌಂಟ್ ಮೌಂಗನ್ಯುಯಿ (ನ್ಯೂಜಿಲೆಂಡ್)
ನೇರ ಪ್ರಸಾರ: ದೂರದರ್ಶನ ಸ್ಪೋರ್ಟ್ಸ್, ಅಮೆಝಾನ್ ಪ್ರೈಮ್
ಸಂಭಾವ್ಯ ಆಡುವ ಹನ್ನೊಂದರ ಬಳಗ
ಭಾರತ : ರಿಷಬ್ ಪಂತ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯಜುವೇಂದ್ರ ಚಾಹಲ್, ಮುಹಮ್ಮದ್ ಸಿರಾಜ್.
ನ್ಯೂಜಿಲೆಂಡ್ : ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಷೆಲ್, ಜೇಮ್ಸ್ ನೀಶಮ್, ಮಿಷೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಲೂಕಿ ಫರ್ಗುಸನ್, ಟಿಮ್ ಸೌಥಿ ಮತ್ತು ಇಶ್ ಸೋಧಿ.