
- ಕಿವೀಸ್ ತಂಡ ಮುನ್ನಡೆಸಲಿರುವ ಟಿಮ್ ಸೌಥಿ
- 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡ ಭಾರತ
2022ರ ಟಿ20 ವಿಶ್ವಕಪ್ ಪಂದ್ಯಾವಳಿ ಮುಗಿದ ಬಳಿಕ ನ್ಯೂಜಿಲೆಂಡ್ ಮತ್ತು ಭಾರತ ತಂಡಗಳ ನಡುವೆ ಚುಟುಕು ಕ್ರಿಕೆಟ್ ಸರಣಿ ನಡೆಯುತ್ತಿದೆ. ಮೊದಲ ಟಿ20 ಪಂದ್ಯ ಮಳೆಗಾಹುತಿಯಾದರೆ, ಎರಡನೇ ಟಿ20 ಪಂದ್ಯವನ್ನು ಪ್ರವಾಸಿ ತಂಡ ಭಾರತ 65 ರನ್ಗಳ ಅಂತರದಿಂದ ಗೆದ್ದು, ಸರಣಿಯಲ್ಲಿ 1- 0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಮಂಗಳವಾರ ಮೂರನೇ ಟಿ20 ಪಂದ್ಯಕ್ಕೆ ಎರಡೂ ತಂಡಗಳು ಸಜ್ಜಾಗಿವೆ. ಸರಣಿ ಸಮಬಲಗೊಳಿಸಲು ನ್ಯೂಜಿಲೆಂಡ್ಗೆ ಇದು ಮಾಡು ಇಲ್ಲ ಮಡಿ ಪಂದ್ಯವಾಗಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಯುವ ಆಟಗಾರರೇ ತುಂಬಿದ ಭಾರತ ತಂಡ, ಸರಣಿ ಗೆಲ್ಲುವ ಸುವರ್ಣಾವಕಾಶ ಬಳಸಿಕೊಳ್ಳಲು ಸಜ್ಜಾಗುತ್ತಿದೆ.
ಟಿಮ್ ಸೌಥಿಗೆ ನಾಯಕತ್ವ
ನೇಪಿಯರ್ನಲ್ಲಿ ಮಂಗಳವಾರ ನಡೆಯಲಿರುವ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಿಂದ ಆತಿಥೇಯ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಹೊರಗುಳಿಯಲಿದ್ದಾರೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಸೋಮವಾರ ದೃಢಪಡಿಸಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ವೇಗಿ ಟಿಮ್ ಸೌಥಿ ಕಿವೀಸ್ ತಂಡವನ್ನು ಮುನ್ನಡೆಸಲಿದ್ದಾರೆ.
ಇದೇ ಶುಕ್ರವಾರದಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ತಮ್ಮ ತಂಡವನ್ನು ಮುನ್ನಡೆಸಲು ಕೇನ್ ವಿಲಿಯಮ್ಸನ್ ಮರಳಲಿದ್ದಾರೆ.
ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿ ನ್ಯೂಜಿಲೆಂಡ್
ಭಾರತ 1- 0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಇಂದು ನಡೆಯಲಿರುವ ಪಂದ್ಯದಲ್ಲಿ ಗೆದ್ದು, ಐತಿಹಾಸಿಕ ಸಾಧನೆ ಮಾಡುವ ಕಾತರದಲ್ಲಿದೆ. ಕಳೆದ ಪಂದ್ಯದಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ನ್ಯೂಜಿಲೆಂಡ್ ಕಮ್ಬ್ಯಾಕ್ ಮಾಡುವ ಮೂಲಕ ತವರಿನಲ್ಲಿ ಮುಖಭಂಗ ತಪ್ಪಿಸಿಕೊಳ್ಳುವ ಒತ್ತಡದಲ್ಲಿದೆ. ಹೀಗಾಗಿ ಮಂಗಳವಾರದ ಪಂದ್ಯ ರೋಚಕ ಮನರಂಜನೆ ನೀಡಲಿದೆ.
ಪಂದ್ಯ ಆರಂಭ; ಮಧ್ಯಾಹ್ನ 12ಕ್ಕೆ (ಭಾರತೀಯ ಕಾಲಮಾನ)
ಸ್ಥಳ: ಸ್ಕೈ ಸ್ಟೇಡಿಯಂ, ವೆಲ್ಲಿಂಗ್ಟನ್ (ನ್ಯೂಜಿಲೆಂಡ್)
ನೇರ ಪ್ರಸಾರ: ದೂರದರ್ಶನ ಸ್ಪೋರ್ಟ್ಸ್, ಅಮೆಝಾನ್ ಪ್ರೈಮ್
ಸಂಭಾವ್ಯ ಆಡುವ ಹನ್ನೊಂದರ ಬಳಗ
ಭಾರತ : ರಿಷಬ್ ಪಂತ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯಜುವೇಂದ್ರ ಚಾಹಲ್, ಮುಹಮ್ಮದ್ ಸಿರಾಜ್.
ನ್ಯೂಜಿಲೆಂಡ್ : ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಷೆಲ್, ಜೇಮ್ಸ್ ನೀಶಮ್, ಮಿಷೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಲೂಕಿ ಫರ್ಗುಸನ್, ಟಿಮ್ ಸೌಥಿ ಮತ್ತು ಇಶ್ ಸೋಧಿ.