
- ಸರಣಿಯ ಮೊದಲ ಪಂದ್ಯ ಮಳೆಯಿಂದ ರದ್ದಾಗಿದೆ
- ಭಾರತ 1- 0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ
ನ್ಯೂಜಿಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿದೆ. ನೇಪಿಯರ್ನಲ್ಲಿ ನಡೆಯುತ್ತಿರುವ ಈ ಪಂದ್ಯವನ್ನು ಗೆಲ್ಲುವ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡ ಸರಣಿ ವಶಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಸರಣಿಯ ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರೆ, ಭಾನುವಾರ ನಡೆದಿದ್ದ ಎರಡನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ಭರ್ಜರಿ ಶತಕದ ನೆರವಿನಿಂದ ಗೆದ್ದ ಭಾರತ 1–0 ರಲ್ಲಿ ಮುನ್ನಡೆ ಸಾಧಿಸಿತ್ತು.
ತಡವಾದ ಟಾಸ್
ಈ ಪಂದ್ಯವು ಬೆಳಿಗ್ಗೆ 11.30ಕ್ಕೆ ಟಾಸ್ ಮತ್ತು 12ಕ್ಕೆ ಪಂದ್ಯ ಆರಂಭವಾಗಬೇಕಿತ್ತು. ಆದರೆ ನೇಪಿಯರ್ನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಟಾಸ್ ತಡವಾಗಿದೆ.
ಭಾರತ:
ಇಶಾನ್ ಕಿಶನ್, ರಿಷಭ್ ಪಂತ್ ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ(ಸಿ), ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
Playing XI update 🚨
— BCCI (@BCCI) November 22, 2022
One change for #TeamIndia as Harshal Patel comes in place of Washington Sundar
Follow the match 👉 https://t.co/rUlivZ2sj9 pic.twitter.com/CneSI2LLK5
ಟಿಮ್ ಸೌಥಿಗೆ ನಾಯಕತ್ವ
ನೇಪಿಯರ್ನಲ್ಲಿ ಮಂಗಳವಾರ ನಡೆಯಲಿರುವ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಿಂದ ಆತಿಥೇಯ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಹೊರಗುಳಿಯಲಿದ್ದಾರೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಸೋಮವಾರ ದೃಢಪಡಿಸಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ವೇಗಿ ಟಿಮ್ ಸೌಥಿ ಕಿವೀಸ್ ತಂಡವನ್ನು ಮುನ್ನಡೆಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಟಿ20 ಸರಣಿ | ಗೆಲ್ಲುವ ತವಕದಲ್ಲಿ ಭಾರತ; ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿ ನ್ಯೂಜಿಲೆಂಡ್
ಇದೇ ಶುಕ್ರವಾರದಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ತಮ್ಮ ತಂಡವನ್ನು ಮುನ್ನಡೆಸಲು ಕೇನ್ ವಿಲಿಯಮ್ಸನ್ ಮರಳಲಿದ್ದಾರೆ.
ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿ ನ್ಯೂಜಿಲೆಂಡ್
ಭಾರತ 1- 0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಇಂದು ನಡೆಯಲಿರುವ ಪಂದ್ಯದಲ್ಲಿ ಗೆದ್ದು, ಐತಿಹಾಸಿಕ ಸಾಧನೆ ಮಾಡುವ ಕಾತರದಲ್ಲಿದೆ. ಕಳೆದ ಪಂದ್ಯದಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ನ್ಯೂಜಿಲೆಂಡ್ ಕಮ್ಬ್ಯಾಕ್ ಮಾಡುವ ಮೂಲಕ ತವರಿನಲ್ಲಿ ಮುಖಭಂಗ ತಪ್ಪಿಸಿಕೊಳ್ಳುವ ಒತ್ತಡದಲ್ಲಿದೆ.