ಒಂದು ನಿಮಿಷದ ಓದು| ಕ್ರೀಡಾ ತಾರೆಯರಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕ್ರೀಡಾ ತಾರೆಯರು ದೇಶದ ಜನರಿಗೆ ಶುಭಾಶಯ ಕೋರಿದ್ದು, ತ್ರಿವರ್ಣ ಧ್ವಜ ಹಾರಿಸಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ್ದಾರೆ. ಬಿಸಿಸಿಐ, ಸಚಿನ್‌ ತೆಂಡೂಲ್ಕರ್‌, ವಿರಾಟ್‌ ಕೊಹ್ಲಿ, ಕುಸ್ತಿ ಪಟು ಭಜರಂಗ್‌ ಪೂನಿಯಾ ಸೇರಿದಂತೆ ಐಪಿಎಲ್‌ನ ಎಲ್ಲ ಫ್ರಾಂಚೈಸಿಗಳು ತಮ್ಮ ಟ್ವಿಟರ್‌, ಇನ್‌ಸ್ಟಾಗ್ರಾಮ್‌ ಖಾತೆಗಳಲ್ಲಿ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತ್ರಿರ್ವಣ ಧ್ವಜವನ್ನು ಹಿಡಿದು ಶುಭ ಕೋರಿ ಹಲವು ಕ್ರೀಡಾ ತಾರೆಯರು ಪೋಸ್ಟ್‌ ಮಾಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್