ವಿಶ್ವ ಅಥ್ಲೆಟಿಕ್ | ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ನೀರಜ್ ಚೋಪ್ರಾ

  • ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ
  • ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ 

ಟೋಕಿಯೊ ಒಲಿಂಪಿಕ್ಸ್‌ನಲ್ಲಿ  ಚಿನ್ನದ ಪದಕ ವಿಜೇತ ನೀರಜ್‌ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾದ ನಿರ್ಮಿಸಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

ಭಾನುವಾರ (ಜುಲೈ 24) ನಡೆದ ಫೈನಲ್‌ನಲ್ಲಿ ನೀರಜ್‌ ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಎಸೆಯುವ ಮೂಲಕ ಈ ಐತಿಹಾಸಿಕ ಸಾಧನೆ  ಮಾಡಿದ್ದಾರೆ. ಅವರು ಅರ್ಹತಾ ಸುತ್ತಿನಲ್ಲಿಯೂ ಎರಡನೇ ಸ್ಥಾನ ಪಡೆದು ಫೈನಲ್‌ ಪ್ರವೇಶಿಸಿದ್ದರು.

ಈ  ಸ್ಪರ್ಧೆಯಲ್ಲಿ ಗ್ರೆನಾಡದ ಆ್ಯಂಡರ್ಸನ್‌ ಪೀಟರ್ಸ್‌ ಅವರು 90.54 ಮೀಟರ್‌ ದೂರ ಎಸೆದು ಚಿನ್ನದ ಪದಕ ಬಾಚಿಕೊಂಡಿದ್ದಾರೆ. ಚೆಕ್‌ ಗಣರಾಜ್ಯದ ಜಾಕೂಬ್‌ ವಾಡ್ಲೆಚ್‌ ಅವರು 88.09 ದೂರ ಎಸೆಯುವುದರೊಂದಿಗೆ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದಕೊಂಡರು.

19 ವರ್ಷಗಳ ಬಳಿಕ ಭಾರತಕ್ಕೆ ಪದಕ

ನೀರಜ್‌ ಚೋಪ್ರಾ ಅವರು ಬೆಳ್ಳಿ ಗೆಲ್ಲುವ ಮೂಲಕ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ 19 ವರ್ಷಗಳ ಬಳಿಕ ಭಾರತಕ್ಕೆ ಪದಕ ಗೆದ್ದುಕೊಟ್ಟರು. 2003ರಲ್ಲಿ ಮಹಿಳೆಯರ ಲಾಂಗ್ ಜಂಪ್‌ ಸ್ಪರ್ಧೆಯಲ್ಲಿ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್