ಮಂಡ್ಯ | ಸೆ.28ರಿಂದ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ

Mandya
  • ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಜ್ಜಾದ ಶ್ರೀರಂಗನಾಥ ವೇದಿಕೆ
  • ವಿವಿಧ ರಾಜಕೀಯ ಮುಖಂಡರು ಭಾಗಿಯಾಗುವ ಸಾಧ್ಯತೆ

ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 28ರಿಂದ ಆರಂಭವಾಗಲಿದ್ದು, ಐದು ದಿನಗಳ ಕಾಲ ನಡೆಯಲಿದೆ. ಈ ಐತಿಹಾಸಿಕ ಮಹೋತ್ಸವಕ್ಕೆ ಸಿದ್ದತೆ ಭರದಿಂದ ನಡೆಯುತ್ತಿದೆ.

ಬುಧವಾರ ಮಧ್ಯಾಹ್ನ 2.15 ಗಂಟೆಗೆ ಕಿರಂಗೂರಿನ ಬನ್ನಿ ಮಂಟಪದಲ್ಲಿ ನಂದಿ ಧ್ವಜ ಪೂಜೆಯೊಂದಿಗೆ ಶ್ರೀರಂಗಪಟ್ಟಣ ದಸರಾ ಆರಂಭಗೊಳ್ಳಲಿದೆ. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಯೊಂದಿಗೆ ದಸರಾಕ್ಕೆ ರಂಗು ತುಂಬಲಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಠದ ಶಿವರಾತ್ರಿ ದೇಶಿಕೇಂದ್ರದ ಶ್ರೀಗಳು ಐತಿಹಾಸಿಕ ದಸರಾವನ್ನು ಉದ್ಘಾಟಿಸಲಿದ್ದಾರೆ.

Image
Mandya

ಸೆಪ್ಟೆಂಬರ್ 29ರಂದು ಸಂಜೆ 6.30ಕ್ಕೆ ಶ್ರೀ ರಂಗನಾಥ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಂದಾಯ ಸಚಿವ ಆರ್. ಅಶೋಕ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಶ್ರೀ ರಂಗನಾಥ ವೇದಿಕೆಯಲ್ಲಿ ಪ್ರತಿದಿನ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಲಾ ಪ್ರದರ್ಶನ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ?: ಮೈಸೂರು ದಸರಾ | ವಸ್ತು ಪ್ರದರ್ಶನದ ಮಳಿಗೆಗಳು ಖಾಲಿ ಖಾಲಿ!

ದಸರಾದ ಪ್ರಮುಖ ಆಕರ್ಷಣೆಯಾದ ಸಂಗೀತ ರಸ ಸಂಜೆಯಲ್ಲಿ ಖ್ಯಾತ ನಟ, ನಟಿಯರು ಭಾಗವಹಿಸಲಿದ್ದಾರೆ. ಗಾಯಕ, ಗಾಯಕಿಯರಿಂದ ಆಕರ್ಷಕ ಹಾಗೂ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿವೆ. 

Image
Mandya

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ ಸಿ.ನಾರಾಯಣ ಗೌಡ, ಮಾನ್ಯ ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಮುಜರಾಯಿ ಹಾಗೂ ಹಜ್ ಮತ್ತು ವಕ್ಸ್ ಸಚಿವೆ ಶಶಿಕಲಾ ಜೊಲ್ಲೆ ಐತಿಹಾಸಿಕ ಶ್ರೀರಂಗಪಟ್ಟಣ ದಸರಾದಲ್ಲಿ ಭಾಗವಹಿಸಲಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್