ಮಳೆ ಹಾನಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ 2-3 ದಿನಗಳಲ್ಲಿ ಮನವಿ: ಸಿಎಂ ಬೊಮ್ಮಾಯಿ

  • ಕೇಂದ್ರ ಸರ್ಕಾರಕ್ಕೆ ಶೀಘ್ರವೇ ಮನವಿ ಸಿಎಂ ಬೊಮ್ಮಾಯಿ
  • ಇನ್ನೆರಡು ದಿನಗಳಲ್ಲಿ ಮಳೆ ಹಾನಿ ವರದಿ ಲಭ್ಯ: ಸಿಎಂ

ರಾಜ್ಯದಲ್ಲಿನ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಎರಡು ಮೂರು ದಿನಗಳಲ್ಲಿ ವರದಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ರಾಜ್ಯದಲ್ಲಿನ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು ಕೇಂದ್ರ ತಂಡ ನಡೆಸುತ್ತಿರುವ ಸಮೀಕ್ಷಾ ವರದಿ ಶೀಘ್ರ ಸಲ್ಲಿಕೆಯಾಗಲಿದೆ. ಇದಾದ ಬಳಿಕ ಹಾನಿ ಸಂಬಂಧ ಹೆಚ್ಚಿನ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ 2-3 ದಿನಗಳಲ್ಲಿ ಮನವಿ ಸಲ್ಲಿಸಲಾಗುವುದು" ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? : ಸಿಎಂ ಬದಲಾವಣೆ ಚರ್ಚೆಯಲ್ಲಿ ಯಾವುದೇ ಹುರುಳಿಲ್ಲ: ಬಸವರಾಜ ಬೊಮ್ಮಾಯಿ

"ರಾಜ್ಯದಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿದೆ. ಅತಿವೃಷ್ಟಿಯಿಂದಾಗಿ ಮೂಲ ಸೌಕರ್ಯಗಳು ಹಾಳಾಗಿವೆ. ಈ ತುರ್ತು ಕೆಲಸಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ" ಎಂದು ಮುಖ್ಯಮಂತ್ರಿಗಳು ಇದೇ ವೇಳೆ ತಿಳಿಸಿದರು. 

ನಿಮಗೆ ಏನು ಅನ್ನಿಸ್ತು?
0 ವೋಟ್