ಬೆಂಗಳೂರು| ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಅಧಿಕಾರ ಮೊಟಕು ಮಾಡಿಲ್ಲ: ಕೋಟ ಶ್ರೀನಿವಾಸ ಪೂಜಾರಿ

  • ಆದೇಶ ಆಗಿದ್ದರೆ ಅದನ್ನು ರದ್ದು ಮಾಡಲು ಸಿಎಂ ಸೂಚಿಸಿದ್ದಾರೆ
  • ಪಂಚಾಯತ್ ರಾಜ್ ಅಧಿಕಾರವನ್ನು ಅಧ್ಯಕ್ಷರಿಗೆ ಕೊಡಲಾಗುವುದು

“ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಅಧಿಕಾರವನ್ನು ಮೊಟಕು ಮಾಡಿಲ್ಲ” ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. 

"ಚೆಕ್‌ಗೆ ಸಹಿ ಮಾಡುವುದು ಸೇರಿದಂತೆ ಇನ್ನಿತರ ಅಧಿಕಾರವನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ  ಕೊಡಲಾಗುತ್ತದೆ" ಎಂಬ ಆತಂಕ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರಲ್ಲಿತ್ತು. ಈ ಕುರಿತು ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ.

Eedina App

“ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆಗೆ ಈ ಕುರಿತು ಮಾತನಾಡಿದ್ದೇವೆ. ಯಾವುದೇ ಅಧಿಕಾರ ಮೊಟಕು ಇಲ್ಲ. ಯಾವುದೇ ಅಧಿಕಾರಿಗಳು ಏನಾದರೂ ಆದೇಶ ಮಾಡಿದ್ದರೆ ಅದನ್ನು ವಾಪಸ್ ಪಡೆಯಲಿದ್ದಾರೆ” ಎಂದು ಹೇಳಿದ್ದಾರೆ.

“ಎರಡು ದಿನಗಳಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮೊಟಕು ಮಾಡಲಾಗಿದೆ ಎಂದು ಸುದ್ದಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಜತೆಗೆ ಚರ್ಚೆ ಮಾಡಿದ್ದೇನೆ. ಯಾವುದೇ ಆದೇಶ ಆಗಿದ್ದಲ್ಲಿ ಕೂಡಲೇ ಆದೇಶ ರದ್ದು ಮಾಡಲು ಸಿಎಂ ಸೂಚಿಸಿದ್ದಾರೆ” ಎಂದಿದ್ದಾರೆ.

AV Eye Hospital ad

“ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಯಾವುದೇ ಕಾರಣಕ್ಕೂ ಮೊಟಕುಗೊಳಿಸುವುದಿಲ್ಲ. ಮತ್ತಷ್ಟು ಅಧಿಕಾರ ಕೊಡುವ ಬಗ್ಗೆ ಚರ್ಚೆ ಆಗಿದೆ. ಯಾವುದೇ ಕಾರಣಕ್ಕೂ ಅಧಿಕಾರಿಗಳಿಗೆ ಅಧಿಕಾರ ಕೊಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಧಾನಸೌಧದಲ್ಲಿ ಚಂಬಲ್ ಕಣಿವೆ ದರೋಡೆಕೋರರು; ಕಾಂಗ್ರೆಸ್-ಬಿಜೆಪಿ ವಿರುದ್ಧ ಎಚ್‌ಡಿಕೆ ಆಕ್ರೋಶ

“ಈ ಪ್ರಸ್ತಾಪವನ್ನು ಇಲಾಖೆ ಅಧಿಕಾರಿಗಳು ಕಳುಹಿಸಿದ್ದರೂ ಆ ಪ್ರಸ್ತಾವನೆ ಕಡೆಗಣಿಸಲಾಗುವುದು. ಪಂಚಾಯತ್ ರಾಜ್ ಅಧಿಕಾರವನ್ನು ಅಧ್ಯಕ್ಷರಿಗೆ ಕೊಡಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app