ಎಸಿಬಿ ರದ್ದು | ಚರ್ಚೆಯ ನಂತರ ಮುಂದಿನ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

cm basavaraj bommai
  • ಎಸಿಬಿಯನ್ನು ರದ್ದುಗೊಳಿಸಿ ಆದೇಶಿಸಿದ ಕರ್ನಾಟಕ ಹೈಕೋರ್ಟ್
  • ತೀರ್ಪಿನ ವಿವರಗಳನ್ನು ತಿಳಿಯದೆ ಪ್ರತಿಕ್ರಿಯೆ ನೀಡಲ್ಲ

ಕರ್ನಾಟಕ ಉಚ್ಛ ನ್ಯಾಯಾಲಯವು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಪಡಿಸಿ ಆದೇಶಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಮಂಡ್ಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಹಿಂತಿರುಗಿದ ನಂತರ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚೆ ಮಾಡಿ, ಬಳಿಕ ಮುಂದೇನು ಮಾಡಬೇಕೆಂದು ತೀರ್ಮಾನ ಮಾಡಲಾಗುವುದು ಎಂದರು.

ಈ ಸುದ್ದಿ ಓದಿದ್ದೀರಾ? ಎಸಿಬಿ ರಚನೆ ಆದೇಶ ರದ್ದು | ಇದೊಂದು ಐತಿಹಾಸಿಕ ತೀರ್ಪು: ಹೋರಾಟಗಾರ ಎಸ್ ಆರ್ ಹಿರೇಮಠ್ ಸಂತಸ

'ತೀರ್ಪಿನ ವಿವರಗಳನ್ನು ಸರಿಯಾಗಿ ತಿಳಿದುಕೊಳ್ಳದೇ ಪ್ರತಿಕ್ರಿಯೆ ನೀಡಬಯಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್