ಕೋವಿಡ್‌ ಸೋಂಕಿನ ಮಧ್ಯೆಯೂ ಕರ್ತವ್ಯಕ್ಕೆ ಸಜ್ಜಾದ ಸಿಎಂ; ನೆರೆಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ವಿಡಿಯೋ ಸಂವಾದ

  • ಖಾಸಗಿ ನಿವಾಸದಿಂದಲೇ ಜಿಲ್ಲಾಧಿಕಾರಿಗಳ ಸಭೆ ನಡೆಸಲಿರುವ ಮುಖ್ಯಮಂತ್ರಿ
  • ಮಧ್ಯಾಹ್ನ 4 ಗಂಟೆಗೆ ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ

ಕೊರೋನಾ ಸೋಂಕಿಗೊಳಗಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಮಧ್ಯೆಯೂ ಎಂದಿನಂತೆ ತಮ್ಮ ಕೆಲಸಗಳನ್ನು ಮುಂದುವರೆಸುತ್ತಿದ್ದಾರೆ. 

ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ವೈದ್ಯರು ಪ್ರತ್ಯೇಕವಾಸ ಹಾಗೂ ವಿಶ್ರಾಂತಿಗೆ ಸೂಚನೆ ನೀಡಿದ್ದರು. ಹೀಗಿದ್ದರೂ ತಾವು ಕೆಲಸ ಮಾಡುವುದಾಗಿ ಅಧಿಕಾರಿಗಳಿಗೆ ತಿಳಿಸಿದ ಸಿಎಂ, ಮನೆಯಿಂದಲೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲು ಅಗತ್ಯ ಸಿದ್ಧತೆ ಮಾಡುವಂತೆ ಸೂಚಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಇಂದು( ಶನಿವಾರ) ಮಧ್ಯಾಹ್ನ 4 ಗಂಟೆಗೆ ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಅತಿವೃಷ್ಟಿಯಿಂದಾದ ಹಾನಿ ಮತ್ತು ಪರಿಹಾರ ಕ್ರಮದ ಬಗ್ಗೆ  ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಒಂದು ನಿಮಿಷದ ಓದು | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ದಾವಣಗೆರೆ, ತುಮಕೂರು, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ಬೀದರ್, ಕಲಬುರಗಿ, ಗದಗ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಇಂದಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳಿಗೆ ಮಾಹಿತಿ ಒದಗಿಸಲಿದ್ದಾರೆ. 

ನಿಮಗೆ ಏನು ಅನ್ನಿಸ್ತು?
0 ವೋಟ್