ಮಹಾರಾಷ್ಟ್ರ ಗಡಿ ವಿವಾದ| ಮುಂದಿನ ವಾರ ಸರ್ವಪಕ್ಷ ಸಭೆ ಕರೆಯುತ್ತೇವೆ: ಸಿಎಂ ಬೊಮ್ಮಾಯಿ

CM ALLPARTY MEETING BYTE
  • ಏಕನಾಥ್ ಶಿಂಧೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ
  • ನಮಗೆ ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡಿಸುವ ಉದ್ದೇಶವಿದೆ

ಮಹಾರಾಷ್ಟ್ರ ಗಡಿವಿವಾದ ಸಂಬಂಧ ಮುಂದಿನ ವಾರ ಸರ್ವ ಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ವಿವಾದದ ಬಗ್ಗೆ ಮಾತುಕತೆ ನಡೆಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ಪ್ರಸ್ತಾಪದ ಬಗ್ಗೆ ಚರ್ಚಿಸಲು ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಹೇಳಿಕೆ ಗಮನಿಸಿದ್ದೇನೆ. ಸುಪ್ರೀಂಕೋರ್ಟ್‌ನಲ್ಲಿ ವಾದ ಮಾಡುವ ಬಗ್ಗೆ ಈ ಹಿಂದೆ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಧಾರವಾಗಿತ್ತು. ಆದರೆ ಈಗ ಮಹಾರಾಷ್ಟ್ರ ಸಿಎಂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದಕ್ಕೆ ಹೇಳಿಕೆ ನೀಡಿದ್ದಾರೆ ಎಂದ ಮುಖ್ಯಮಂತ್ರಿಗಳು, ಸದ್ಯ ನಮಗೆ ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡಿಸುವ ಉದ್ದೇಶವಿದೆ ಎಂದರು.

ಈ ಸುದ್ದಿ ಓದಿದ್ದೀರಾ? : ಬೆಳಗಾವಿ ಗಡಿ ವಿವಾದ | ವಿಪಕ್ಷಗಳನ್ನೊಳಗೊಂಡ ಸಲಹಾ ಸಮಿತಿ ನೇಮಿಸಿ; ಸಿಎಂಗೆ ಸಿದ್ದರಾಮಯ್ಯ ಆಗ್ರಹ 

ಜತ್ ತಾಲ್ಲೂಕು ಕರ್ನಾಟಕಕ್ಕೆ ಸೇರಿಸುವ ಬಗ್ಗೆ ಬೆಳಗಾವಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು ನಿರ್ಧರಿಸಿವೆ. ಈ ವಿಚಾರಗಳೆಲ್ಲವೂ ಸುಪ್ರೀಂಕೋರ್ಟ್ ವಾದ ಮಂಡನೆ ವೇಳೆ ಪ್ರಸ್ತಾಪವಾಗಲಿವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180