ಅಧಿವೇಶನದ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌ : ಕಾಂಗ್ರೆಸ್‌ನಿಂದ ತೀವ್ರ ಟೀಕೆ

  • ಮಲ್ಲಿಕಾರ್ಜುನ ಖರ್ಗೆ ವಿರುದ್ದ ಇಡಿ ಅಸ್ತ್ರ ಪ್ರಯೋಗಿಸಿದ ಬಿಜೆಪಿ 
  • ಪ್ರಧಾನಿ ಮೋದಿ ನಡೆಯನ್ನು ಟೀಕಿಸಿದ ರಾಜ್ಯ ಕಾಂಗ್ರೆಸಿಗರು

ಸಂಸತ್ತಿನ ಅಧಿವೇಶನ ನಡೆಯುತ್ತಿರುವ ವೇಳೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ನೋಟಿಸ್‌ ಜಾರಿ ಮಾಡಿದೆ. ಈ ವಿಚಾರವೀಗ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಣ ಮತ್ತೊಂದು ಸಮರಕ್ಕೆ ಕಾರಣವಾಗಿದೆ. ಸರ್ಕಾರಿ ಸಂಸ್ಥೆ ಬಳಸಿಕೊಂಡು ರಾಜಕಾರಣ ಮಾಡಲು ಹೊರಟ ಸರ್ಕಾರದ ಕ್ರಮಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಈ ನಡೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಮತ್ತು ಹರಿಪ್ರಸಾದ್‌ ಟ್ವೀಟ್‌ ಸಾರಾಂಶ ಹೀಗಿದೆ.

ಬಿಜೆಪಿ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಜನರ ಮನಸ್ಸನ್ನು ಬೇರೆಡೆ ಸೆಳೆಯಲು ಮಾಡುತ್ತಿರುವ ತಂತ್ರ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಅತ್ಯಂತ ಕೆಟ್ಟ ಪರಂಪರೆಗೆ ಬಿಜೆಪಿ ನಾಂದಿ ಹಾಡಿದೆ. ಅಧಿವೇಶನದ ವೇಳೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ನೀಡಿರುವುದು ಮೋದಿ ಸರ್ಕಾರದ ರಣಹೇಡಿತನಕ್ಕೆ ಹಿಡಿದ ಕೈಗನ್ನಡಿ. ಅಧಿವೇಶನದಲ್ಲಿ ಬೆಲೆ ಏರಿಕೆ, ಅವೈಜ್ಞಾನಿಕ ಜಿಎಸ್‌ಟಿ,ಜನ ವಿರೋಧಿ ನೀತಿಗಳನ್ನ ಎದುರಿಸಲು 56 ಇಂಚಿನ ಎದೆಗೆ ಧೈರ್ಯವಿಲ್ಲ ಎಂದು ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
1 ವೋಟ್