ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಸಭೆಗೆ ಬಂದಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಹೃದಯಾಘಾತದಿಂದ ನಿಧನ

ಗದಗಿನ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.

ಬೆಂಗಳೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆಗೆ ಬಂದಿದ್ದ ಶ್ರೀಶೈಲಪ್ಪ ಅವರು, ಸಭೆಯ ಮಧ್ಯೆ ವಾಂತಿ ಮಾಡಿಕೊಂಡು ನೆಲಕ್ಕೆ ಕುಸಿದು ಬಿದ್ದರು.

ಕೂಡಲೇ ಅವರನ್ನು ವರ್ತೂರು ಕೋಡಿಯ ಬಳಿ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ.

2019ರ ಏಪ್ರಿಲ್‌ನಲ್ಲಿ ಗದಗ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಬಿದರೂರು ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಮೂರು ಬಾರಿ ಶಾಸಕರಾಗಿಯೂ ಆಯ್ಕೆಯಾಗಿದ್ದರು.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆಪ್ತನಾಗಿದ್ದರೂ, 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಶ್ರೀಶೈಲಪ್ಪ ಅವರು, ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಶ್ರೀಶೈಲ ಅವರಿಗೆ 60 ವರ್ಷ ವಯಸ್ಸಾಗಿತ್ತು.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app