ಸರ್ಕಾರಿ ಗೌರವಗಳೊಂದಿಗೆ ಶಿವಮೊಗ್ಗ ಸುಬ್ಬಣ್ಣ ಅಂತ್ಯಕ್ರಿಯೆ: ಮುಖ್ಯಮಂತ್ರಿ ಬೊಮ್ಮಾಯಿ

  • ಸರ್ಕಾರಿ ಗೌರವಗಳೊಂದಿಗೆ ಶಿವಮೊಗ್ಗ ಸುಬ್ಬಣ್ಣ ಅಂತ್ಯಕ್ರಿಯೆ
  • ರವೀಂದ್ರ ಕಲಾಕ್ಷೇತ್ರದಲ್ಲಿ ಸುಬ್ಬಣ್ಣ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Image

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರವೀಂದ್ರ ಕಲಾಕ್ಷೇತ್ರದಲ್ಲಿ ಸುಬ್ಬಣ್ಣ ಅವರ ಪಾರ್ಥಿವ ಶರೀರವನ್ನು ಇಟ್ಟು ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು.

ಈ ಸುದ್ದಿ ಓದಿದೀರಾ? : ಖ್ಯಾತ ಗಾಯಕ, ಹಿರಿಯ ವಕೀಲ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

"ಶಿವಮೊಗ್ಗ ಸುಬ್ಬಣ್ಣ ಅವರು ಸಾಹಿತ್ಯ, ಸಂಗೀತ, ಹಾಡುಗಾರಿಕೆಯಲ್ಲಿ ಪರಿಣಿತರಾಗಿದ್ದರು. ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಕರ್ನಾಟಕದ ಮನೆ ಮನೆಗೆ ಹಾಡುಗಳನ್ನು ಮುಟ್ಟಿಸಿದ್ದಾರೆ. ಜನ ಅವರ ಹಾಡುಗಳನ್ನು  ಕೇಳಿ ಆನಂದಿಸಿ ಪ್ರೇರಣೆ ಪಡೆದಿದ್ದಾರೆ. ಇಂತಹ ಮಹಾನ್ ಕಲಾವಿದರನ್ನು ಕಳೆದುಕೊಂಡು ಕನ್ನಡ ನಾಡು ಹಾಗೂ ಕನ್ನಡದ ಸಾಂಸ್ಕೃತಿಕ ಲೋಕ ಬಡವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ" ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್