ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ; ಸಿಎಂ ಜೊತೆ ಚರ್ಚಿಸಿ ಮುಂದಿನ ಕ್ರಮ: ಸಚಿವ ಆರ್‌ ಅಶೋಕ್‌

  • ಮತ್ತೆ ವಿವಾದದ ಕೇಂದ್ರವಾಗುತ್ತದೆಯೇ ಬೆಂಗಳೂರು ಈದ್ಗಾ ಮೈದಾನ?
  • ಬೆಂಗಳೂರು ಜಿಲ್ಲಾಧಿಕಾರಿಗಳ ಮನವಿಗೆ ಒಪ್ಪಿಗೆ ನೀಡುತ್ತಾ ಸರ್ಕಾರ? 

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗೌರಿ ಗಣೇಶ ಹಬ್ಬ ಆಚರಿಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಪತ್ರ ಬಂದಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಹೇಳಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಇಲ್ಲಿ ಏನೇನು ನಡೆಯಬೇಕು ಎಂದು ಸರ್ಕಾರ ನಿರ್ಧರಿಸುತ್ತದೆ. ಹೀಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡಲಾಗುತ್ತದೆ" ಎಂದು ತಿಳಿಸಿದರು.

"ಗಣೇಶ ಹಬ್ಬ ಆಚರಿಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಪತ್ರ ಬಂದಿದೆ. 75ನೇ ಸ್ವಾಂತಂತ್ರೋತ್ಸವವನ್ನು ಸ್ಥಳೀಯರ ಸಹಕಾರದಿಂದ ಯಶಸ್ವಿಯಾಗಿ ಈದ್ಗಾ ಮೈದಾನದಲ್ಲಿ ಆಚರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಜಿಲ್ಲಾಧಿಕಾರಿಗಳು ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಕೇಳಿದ್ದಾರೆ. ಆ ಬಗ್ಗೆ ಪರಿಶೀಲಿಸಲಾಗುತ್ತಿದೆ" ಎಂದು ಅಶೋಕ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಸಮಾಜದ ಸಾಮರಸ್ಯ ಹಾಳು ಮಾಡುವ ಸಂಘಟನೆಗಳನ್ನು ಬೊಮ್ಮಾಯಿ ನಿಷೇಧಿಸಲಿ: ಸಿದ್ದರಾಮಯ್ಯ ಆಗ್ರಹ

ಇದೇ ವೇಳೆ ಶಿವಮೊಗ್ಗ ಗಲಭೆಗೆ ಕಾರಣವಾದ ಸಾರ್ವಕರ್‌ ಭಾವಚಿತ್ರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ  ಪ್ರತಿಕ್ರಿಯೆ ನೀಡಿದ ಅಶೋಕ್, "ಮುಸ್ಲಿಂ ಏರಿಯಾ ಅಂದರೆ ಅದು ಪಾಕಿಸ್ತಾನದಲ್ಲಿದೆಯಾ.? ವೀರ ಸಾವರ್ಕರ್ ಅವರನ್ನ ಕಾಂಗ್ರೆಸ್‌ನವರು ಒಪ್ಪದೇ ಇರಬಹುದು. ಆದರೆ, ಸಾವರ್ಕರ್ ದೇಶಭಕ್ತ. ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದವರು" ಎಂದು ತಿರುಗೇಟು ನೀಡಿದರು. 

ನಿಮಗೆ ಏನು ಅನ್ನಿಸ್ತು?
0 ವೋಟ್