ಹಿಂದಿ ರಾಷ್ಟೀಯ ಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ: ಬಿಜೆಪಿಗರಿಗೆ ಟ್ವೀಟ್ ಚಾಟಿ ಬೀಸಿದ ಸಿದ್ದರಾಮಯ್ಯ

  • ಅನಗತ್ಯ ಹಿಂದಿ ಹೇರಿಕೆ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿದ ಸಿದ್ದರಾಮಯ್ಯ 
  • 'ಸ್ವಾಭಿಮಾನಿ ಕನ್ನಡಿಗರಾಗಿ' ಎಂದು ಬಿಜೆಪಿಗರಿಗೆ ಕಿವಿ ಮಾತು ಹೇಳಿದ ವಿಪಕ್ಷ ನಾಯಕ  

ಕೇಂದ್ರ ಬಿಜೆಪಿ ಸರ್ಕಾರದ ಅನವಶ್ಯಕ ಹಿಂದಿ ಹೇರಿಕೆ ನೀತಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿಗೆ ತಿರುಗೇಟು ನೀಡಿರುವ ಅವರು, ಕೇಂದ್ರದ ಹಿಂದಿ ಹೇರಿಕೆ ವಿಚಾರದಲ್ಲಿ ಗಮನ ಹರಿಸುವಂತೆ ಕಿವಿಮಾತು ಹೇಳಿದ್ದಾರೆ.

ಟ್ವೀಟ್ ಮೂಲಕ ಈ ವಿಚಾರವನ್ನು ಮುನ್ನೆಲೆಗೆ ತಂದಿರುವ ಸಿದ್ದರಾಮಯ್ಯ, "ನಾನೊಬ್ಬ ಹೆಮ್ಮೆಯ ಕನ್ನಡಿಗನಾಗಿ ಕೇಂದ್ರದ ಹಿಂದಿ ಹೇರಿಕೆ ವಿಚಾರದ ಬಗ್ಗೆ ಪ್ರತಿಭಟನೆ ದಾಖಲಿಸಿದ್ದೇನೆ. ಆ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂತರ್ಜಾಲ ತಾಣದಲ್ಲಿ ಹಾಕಲಾಗಿದ್ದ 'ಘರ್ ಘರ್ ತಿರಂಗಾ' ಜಾಹೀರಾತನ್ನು ಅಲ್ಲಿಂದ ತೆಗೆಸುವಂತೆ ಮಾಡಿದ್ದೇನೆ. ನಾನು ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಅನಗತ್ಯವಾಗಿ ತುರುಕಿದ್ದ ಹಿಂದಿಯನ್ನು ಕಿತ್ತೊಗೆದಿದೆ" ಎಂದಿದ್ದಾರೆ.

"ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು. ಇದು ನಾವು ಹೇಳಿ ಬರುವಂಥದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ" ಎಂದೂ ಈ ವೇಳೆ ಸಿದ್ದರಾಮಯ್ಯ ಬಿಜೆಪಿಗರನ್ನು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಬ್‌ಸೈಟಿನಲ್ಲಿ ‘ಹಿಂದಿ ಪ್ರಚಾರ’: ಬಿಜೆಪಿಯಿಂದ ಮತ್ತೆ ಮತ್ತೆ ಕನ್ನಡಕ್ಕೆ ಅಪಮಾನ

ಈದಿನ.ಕಾಮ್ ಕನ್ನಡ ಸಂಸ್ಕೃತಿ ಇಲಾಖೆಯ ಹಿಂದಿ ಪ್ರೇಮದ ಬಗ್ಗೆ ವರದಿ ಮಾಡಿ ಬೆಳಕು ಚೆಲ್ಲಿತ್ತು. ಇದನ್ನೇ ಉಲ್ಲೇಖಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಸರ್ಕಾರದ ಹಿಂದಿ ವಿರೋಧಿ ನೀತಿಯನ್ನು ಖಂಡಿಸಿದ್ದರು. 

ನಿಮಗೆ ಏನು ಅನ್ನಿಸ್ತು?
0 ವೋಟ್