ಅಮೃತ ಮಹೋತ್ಸವ ಪಾದಯಾತ್ರೆ| ಕಾರ್ಯಕ್ರಮಕ್ಕೆ ಬರುವವರಿಗೆ ಪ್ರಯಾಣ ವೆಚ್ಚ ರಿಯಾಯ್ತಿ ಕೊಡಿ: ಸರ್ಕಾರಕ್ಕೆ ಡಿಕೆಶಿ ಮನವಿ 

  • ಪಕ್ಷಾತೀತವಾಗಿ ಕಾಂಗ್ರೆಸ್ ಧ್ವಜನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿಕೆಶಿ ಕರೆ 
  • ತಿರಂಗಾ ಹಿಡಿಯಲು ನಮ್ಮಷ್ಟು ಹಕ್ಕು ಬೇರೆ ಪಕ್ಷದವರಿಗೆ ಇಲ್ಲ ಡಿಕೆಶಿ ಪ್ರತಿಪಾದನೆ

ಆಗಸ್ಟ್ 15ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ರಾಷ್ಟ್ರಧ್ವಜದೊಂದಿಗಿನ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸರ್ಕಾರ ಕೆಲ ರಿಯಾಯ್ತಿ ಘೋಷಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಸಂಬಂಧ ನಮ್ಮ ಮೆಟ್ರೋ ನಿಗಮದ ಪ್ರಮುಖರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಅಂದಿನ ದಿನ ಮೆಟ್ರೋಲ್ಲಿ ಪ್ರಯಾಣ ಮಾಡುವವರಿಗೆ ಶೇಕಡಾ 50% ರಿಯಾಯ್ತಿ ಕೊಡುವಂತೆ ಕೇಳಿಕೊಂಡಿದಾರೆ.

Eedina App

ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಗಾಂಧೀಜಿಯವರು ಹಾಕಿಕೊಟ್ಟ ಪಾದಯಾತ್ರೆಯ ಮಾರ್ಗದರ್ಶನದಂತೆ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ನಷ್ಟು ದೂರ ಹೆಜ್ಜೆ ಹಾಕಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲು ತೀರ್ಮಾನಿಸಿದ್ದೇವೆ. ಅದರ ಭಾಗವಾಗಿ ನಮ್ಮ ನಾಯಕರು, ಮುಖಂಡರು ಎಲ್ಲ ಜಿಲ್ಲೆಗಳಲ್ಲಿ ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

ಬೆಂಗಳೂರಿನಲ್ಲೂ ಈ ಪಾದಯಾತ್ರೆ ನಡೆಯಲಿದೆ. ಆ.15 ರಂದು ಹೊಸ ಇತಿಹಾಸ ಸೃಷ್ಟಿಸಲು 1 ಲಕ್ಷ ಜನ ರಾಷ್ಟ್ರಧ್ವಜ ಹಿಡಿದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ಪಾದಯಾತ್ರೆ ಮಾಡಲಿದ್ದಾರೆ. ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಎಲ್ಲ ವರ್ಗದ ಜನರು ಕುಟುಂಬ ಹಾಗೂ ಸ್ನೇಹಿತರ ಸಮೇತ ಭಾಗವಹಿಸಬಹುದಾಗಿದೆ ಎಂದರು.

AV Eye Hospital ad

ಜನರಿಗೆ ಅನುಕೂಲವಾಗುವಂತೆ ರೈಲ್ವೇ, ಬಸ್ ಹಾಗೂ ಮೆಟ್ರೋ ನಿಲ್ದಾಣದ ಬಳಿ ಇರುವ ಕೇಂದ್ರಗಳನ್ನೇ ಈ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವ ಮೆಟ್ರೋ ಪ್ರಯಾಣಿಕರಿಗೆ ಶೇ.50ರಷ್ಟು ರಿಯಾಯಿತಿ ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರ ಬಳಿ ಮನವಿ ಮಾಡುತ್ತೇನೆ ಎಂದು ಶಿವಕುಮಾರ್ ಹೇಳಿದರು.

ಈ ಸುದ್ದಿ ಓದಿದ್ದೀರಾ? : ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ್ರಾ?: ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಇದರಲ್ಲಿ ಎಲ್ಲರೂ ಭಾಗವಹಿಸಬೇಕು. ಪಾದಯಾತ್ರೆ ನಂತರ ಸಂಜೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹರಿಹರನ್ ಅವರ ತಂಡದಿಂದ ದೇಶಭಕ್ತಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ವಾಂತಂತ್ರ್ಯದ ಶತಮಾನೋತ್ಯವಕ್ಕೆ ಯಾರು ಇರುತ್ತೇವೋ, ಇರುವುದಿಲ್ಲವೋ ಗೊತ್ತಿಲ್ಲ. ಹೀಗಾಗಿ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಶಿವಕುಮಾರ್ ಕೋರಿಕೊಂಡರು.

ಹಾಗೆಯೇ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಕಡೆಯಿಂದ ಎಐಸಿಸಿ ನಾಯಕರು ಬರುತ್ತಿದ್ದಾರೆ. ಅಂದು ಬರುವವರು ಯಾರು ಎಂದು ಅವರೇ ಘೋಷಣೆ ಮಾಡಲಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಇದೇ ವೇಳೆ ಅಧಿಕಾರಕ್ಕಾಗಿ ಕಾಂಗ್ರೆಸ್ ಈ ಕಾರ್ಯಕ್ರಮ ಮಾಡುತ್ತಿದೆ ಎಂಬ ಕುಮಾರಸ್ವಾಮಿ ಅವರ ಟೀಕೆ ವಿಚಾರವಾಗಿನ ಮಾಧ್ಯಮದವರ ಪ್ರಶ್ನೆಗೆ, ಉತ್ತರಿಸಿದ ಶಿವಕುಮಾರ್ ‘ದೇಶಕ್ಕೆ ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬರುವಂತೆ ಪ್ರಜಾಪ್ರಭುತ್ವ ವ್ಯವಸ್ಥೆ ತಂದುಕೊಟ್ಟಿದ್ದೆ ಕಾಂಗ್ರೆಸ್ ಪಕ್ಷ. ಪ್ರಜಾಪ್ರಭುತ್ವ ಇಲ್ಲದಿದ್ದರೆ ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ಮೋದಿ ಅವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯವಾಗುತ್ತಿತ್ತು?’ ಎಂದರು.

"ನಾವು ಗಾಂಧೀಜಿ ಅವರ ಸಂಸ್ಕೃತಿ, ನೆಹರೂ ಅವರ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿದ್ದೇವೆ. ಈ ಧ್ವಜವನ್ನು ಹಿಡಿಯಲು ನಮಗಿರುವಷ್ಟು ಹಕ್ಕು ಬೇರೆಯವರಿಗಿಲ್ಲ" ಎಂದು ಶಿವಕುಮಾರ್ ತಿರುಗೇಟು ನೀಡಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app